ಇದರ ಬೆನ್ನಲ್ಲೇ ಆಗಿನ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಪ್ರವೀಣ್ ನೆಟ್ಟಾರ್ ಪತ್ನಿ ನೂತನ ಅವರಿಗೆ ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕೆಲಸ ನೀಡಿತ್ತು. ಅಲ್ಲದೇ ಆ ಆದೇಶ ಪತ್ರದಲ್ಲಿ 'ಈ ಮುಖ್ಯಮಂತ್ರಿ ಅಧಿಕಾರ ಇರುವ ತನಕ ಅಥವಾ ಮುಂದಿನ ಆದೇಶವರೆಗೆ' ಎಂದು ನೇಮಕಾತಿ ಆದೇಶದಲ್ಲಿ ನಮೂದಿಸಲಾಗಿತ್ತು.