Kodimutt Sri: ಚುನಾವಣಾ ಭವಿಷ್ಯ ನುಡಿದ್ರಾ ಶ್ರೀಗಳು; ಮಠದಿಂದ ಸಂತೋಷವಾಗಿ ಹೊರಬಂದ ಸಿದ್ದರಾಮಯ್ಯ
Election Prediction: ಕೋಡಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀಗಳು ರಾಜಕೀಯದ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಇಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಜೊತೆ ಒಂದು ಗಂಟೆಗೂ ಅಧಿಕ ಕಾಲ ಚರ್ಚೆ ನಡೆಸಿದ್ದಾರೆ.
ಕರ್ನಾಟಕ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿರುವ ಈ ಸಂದರ್ಭದಲ್ಲಿ ಕೋಡಿಮಠದ ಶ್ರೀಗಳ ಈ ಭವಿಷ್ಯಕ್ಕೆ ರಾಜಕೀಯ ಅಂಗಳದಲ್ಲಿ ಹೊಸ ಚರ್ಚೆಗಳಿಗೆ ಕಾರಣವಾಗಿದೆ.
2/ 7
ರಾಜಕೀಯ ಮುಖಂಡರು ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿ ಸೇರಿದಂತೆ ರಾಷ್ಟ್ರೀಯ ನಾಯಕರು ಸಹ ರಾಜ್ಯದಲ್ಲಿದ್ದು ಗೆಲುವಿನ ರಣತಂತ್ರ ಹೆಣೆದಿದ್ದಾರೆ.
3/ 7
ಇಂದು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಕೋಡಿಮಠಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು ಶ್ರೀಗಳ ಜೊತೆಯಲ್ಲಿ ಪ್ರತ್ಯೇಕವಾಗಿ ಚರ್ಚೆ ನಡೆಸಿದರು.
4/ 7
ಈ ವೇಳೆ ಕೋಡಿಮಠದ ಶ್ರೀಗಳು ಈ ಬಾರಿ ಬಹುಮತದ ಸರ್ಕಾರ ರಚನೆ ಆಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರ ಬಂದಿಲ್ಲ.
5/ 7
ಶ್ರೀಗಳ ಭೇಟಿ ಬಳಿಕ ಸಿದ್ದರಾಮಯ್ಯನವರು ಸಂತೋಷದಿಂದಲೇ ಮಠದಿಂದ ಹೊರಗೆ ಬಂದರು ಎಂದು asianet ಸುವರ್ಣ ನ್ಯೂಸ್ ಡಿಜಿಟಲ್ ವರದಿ ಮಾಡಿದೆ.
6/ 7
ಸಿದ್ದರಾಮಯ್ಯನವರು ಶ್ರೀಗಳು ಹಾರ ಹಾಕಿ ಸನ್ಮಾನಿಸಿದ್ದಾರೆ. ಕಾಂಗ್ರೆಸ್ ಸಿಎಂ ಅಭ್ಯರ್ಥಿಗಳ ರೇಸ್ನಲ್ಲಿ ಸಿದ್ದರಾಮಯ್ಯ ಮುಂಚೂಣಿಯಲ್ಲಿದ್ದಾರೆ.
7/ 7
ರಾಜ್ಯದಲ್ಲಿ ಈ ಬಾರಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ. ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾಗಲ್ಲ ಎಂದು ಕೋಡಿ ಶ್ರೀಗಳು ಹೇಳಿದ್ದಾರೆ ಎನ್ನಲಾದ ಹೇಳಿಕೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ ಎಂದು ವಿಜಯ ಕರ್ನಾಟಕ ಪತ್ರಿಕೆ ವರದಿ ಬಿತ್ತರಿಸಿದೆ.
First published:
17