Bengaluru: ಬೆಂಗಳೂರಿನಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ರಾಜಧಾನಿ ಬೆಂಗಳೂರಿನಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ತಾಯಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
1 / 7
ಮಹಾಲಕ್ಷ್ಮಿ ಲೇಔಟ್ನ ವೆಸ್ಟ್ ಆಪ್ ಕಾರ್ಡ್ ರಸ್ತೆಯಲ್ಲಿರೋ ಅಪಾರ್ಟ್ಮೆಂಟ್ನಲ್ಲಿ ಈ ಘಟನೆ ನಡೆದಿದೆ. ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
2 / 7
ಯಶೋಧ (70), ಸುಮನ್ ಗುಪ್ತಾ(41) ಹಾಗೂ ನರೇಶ್ ಗುಪ್ತಾ (36) ಮೃತ ದುರ್ದೈವಿಗಳು. ಮೇಲ್ನೋಟಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
3 / 7
ಯಶೋಧ ಮಗಳು ಹಾಗೂ ಮಗನ ಜೊತೆ ಮಹಾಲಕ್ಷ್ಮಿ ಲೇಔಟ್ನ ಫ್ಲಾಟ್ನಲ್ಲಿ ವಾಸವಿದ್ದರು. ನರೇಶ್ ಗುಪ್ತಾ ಗುತ್ತಿಗೆದಾರರಾಗಿ ಕೆಲಸ ಮಾಡಿಕೊಂಡಿದ್ದರು.
4 / 7
ಸೋಮವಾರ ರಾತ್ರಿ ಘಟನೆ ನಡೆದಿದ್ದು ಬೆಳಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
5 / 7
ಮೂವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದು, ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದಾರೆ.
6 / 7
ಮೃತದೇಹಗಳನ್ನು ಮರಣೋತ್ತರ ಶವ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿದೆ.
7 / 7
ಯಶೋಧಾ ಅವರ ಇಬ್ಬರು ಮಕ್ಕಳಿಗೂ ಮದುವೆ ಆಗಿರಲಿಲ್ಲ.
First published: December 20, 2022, 09:44 IST