ಯಲ್ಲಾಪುರದಲ್ಲಿ ಖಾಸಗಿ ಕಾರ್ಯಕ್ರಮ ಮುಗಿಸಿ ಗೋಕರ್ಣ ಮಹಾಬಲೇಶ್ವರ ದೇವಾಲಯಕ್ಕೆ ಪೂಜೆ ಸಲ್ಲಿಸಲು ತೆರಳುತ್ತಿದ್ದರು ಈ ವೇಳೆ ನಿಯಂತ್ರಣ ತಪ್ಪಿ ಕಾರು ಅಪಘಾತಗೊಂಡಿದೆ ಅಪಘಾತದಲ್ಲಿ ಸಚಿವರ ಕಾಲು ಮತ್ತು ಕೈಗಳಿಗೆ ಗಂಭೀರ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಆದರೆ, ದುರಾದೃಷ್ಟವಶಾತ್ ಅವರ ಪತ್ನಿ ವಿಜಯಾ ನಾಯಕ್ ಸಾವನ್ನಪ್ಪಿದ್ದಾರೆ. ಸಚಿವ ಶ್ರೀಪಾದ್ ನಾಯಕ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಗೋವಾದ ಬಾಂಬೋಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಕೇಂದ್ರ ಸಚಿವ ಶ್ರೀಪಾದ ನಾಯಕ್ ಪತ್ನಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ ವ್ಯಕ್ತಪಡಿಸಿದ್ದಾರೆ