(PHOTOS) : ನಾಲ್ಕು ವರ್ಷಗಳ ಪ್ರೀತಿಗೆ ಸಾಕ್ಷಿಯಾಯ್ತು ಪ್ರೇಮಿಗಳ ದಿನ

ಕೇರಳ ವಧು, ಆಂಧ್ರ ವರನಿಗೆ ಕರ್ನಾಟಕದಲ್ಲಿ ಪ್ರೀತಿ ಮೊಳಕೆಯೊಡೆದು ಪ್ರೇಮಿಗಳ ದಿನದಂದೇ ನವ ಜೋಡಿಗಳು ಸಪ್ತಪದಿ ತುಳಿದಿದ್ದಾರೆ. ಕೇವಲ ಅರ್ಧ ಗಂಟೆಯಲ್ಲಿ ಸರಳ ವಿವಾಹ ಮುಗಿದಿದ್ದು ಹೊಸ ಜೀವನಕ್ಕೆ ಅಧಿಕಾರಿಗಳು ಕಾಲಿಟ್ಟಿದ್ದಾರೆ. ದಾವಣಗೆರೆ ಜಿಪಂ ಸಿಇಓ ಅಶ್ವಥಿ ಹಾಗೂ ದಾವಣಗೆರೆಯ ಜಿಲ್ಲಾಧಿಕಾರಿ ಆಗಿರುವ ಡಾ.ಗೌತಮ್ ಬಗಾದಿ ಅವರು ಮದುವೆಯಾದ ಐಎಎಸ್ ಅಧಿಕಾರಿಗಳಾಗಿದ್ದಾರೆ. ಸಿಇಒ ಎಸ್ ಅಶ್ವತಿ ತವರೂರಾದ ಕೇರಳದ ಕೋಯಿಕ್ಕೊಡ್ ನಲ್ಲಿ ಮದುವೆಯಾಗಿದ್ದು, ಹಿಂದೂ ಸಂಪ್ರದಾಯದಂತೆ ಕುಟುಂಬಸ್ಥರ ಜೊತೆ ಸರಳ ವಿವಾಹ ಮಾಡಿಕೊಂಡರು. ಈ ಶುಭ ಸಮಾರಂಭಕ್ಕೆ ಅವರ ಆಪ್ತರು, ನೆಂಟರು, ಬಂಧು ಬಳಗ ಸೇರಿದಂತೆ ದಾವಣಗೆರೆಯ ಅನೇಕ ಹಿರಿಯ ಹಾಗೂ ಕಿರಿಯ ಅಧಿಕಾರಿಗಳು ಬಂದಿದ್ದರು. ಮದುವೆಯ ಚಿತ್ರಗಳು ನ್ಯೂಸ್ 18 ಕನ್ನಡದಲ್ಲಿ

  • News18
  • |
First published: