Bengaluru Rain; ಬೆಂಗಳೂರಿನಲ್ಲಿ ವರುಣನ ಅಬ್ಬರಕ್ಕೆ ಹೈರಾಣದ ಜನರು: ಯಾವ ಏರಿಯಾದಲ್ಲಿ ಎಷ್ಟು ಮಳೆಯಾಗಿದೆ?
ಬೆಂಗಳೂರಿನಲ್ಲಿ (Bengaluru Rains) ಗುರುವಾರ ಧಾರಾಕಾರ ಮಳೆಯಾಗಿದ್ದು , ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಪರಿಣಾಮ ಜನರು ಜಾಗರಣೆ ಮಾಡುವಂತಾಗಿದೆ. ಸುಮಾರು ಮೂರು ಗಂಟೆಗೂ ಅಧಿಕ ಕಾಲ ಮಳೆ(Rain)ಯಾಗಿದೆ, ಇಂದು ಸಹ ನಗರದಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಮಳೆಯಾಗುವ ಸಾಧ್ಯತೆಗಳಿವೆ,
ಬೆಂಗಳೂರಿನ ಯಾವ ವಾರ್ಡುಗಳಲ್ಲಿ ಎಷ್ಟು ಮಳೆಯಾಗಿದೆ ಎಂಬುದರ ಮಾಹಿತಿ ಇಲ್ಲಿದೆ. ನಾಗರಭಾವಿ - 103.5 ಮಿ.ಮೀ, ವಿವಿ ಪುರಂ - 137.0 ಮಿ.ಮೀ. ದೊಡ್ಡನಕ್ಕುಂದಿ - 127.5 ಮಿ.ಮೀ, ಅಗ್ರಹಾರ ದಾಸರಹಳ್ಳಿ - 40.0 ಮಿ.ಮೀ, ನಾಯಂಡನ ಹಳ್ಳಿ 87.5 ಮಿ.ಮೀ, ಸಂಪಗಿರಾಮನಗರ - 63.0 ಮಿ.ಮೀ, ಹಂಪಿ ನಗರ - 120.5 ಮಿ.ಮೀ.ನಷ್ಟು ಮಳೆಯಾಗಿದೆ.
2/ 6
ಕಸ್ತೂರಬಾ ನಗರದ ಕಾಲೋನಿಯ ಎರಡನೇ ಕ್ರಾಸ್ ನಲ್ಲಿ ಮನೆಗಳಿಗೆ ಅಪಾರ ಪ್ರಮಾಣದ ಮಳೆ ನೀರು ನುಗ್ಗಿದೆ. ಮನೆಗಳಲ್ಲಿ ಮಂಡಿಯುದ್ದ ನೀರು ನಿಂತ ಪರಿಣಾಮ ಜನರು ನಿದ್ದೆ ಇಲ್ಲದೇ ಇಡೀ ರಾತ್ರಿ ನೀರು ಹೊರ ಹಾಕೋದರಲ್ಲಿ ನಿರತರಾಗಿದ್ದರು. ಮಳೆ ನೀರಿಗೆ ಮನೆಯಲ್ಲಿದ್ದ ಆಹಾರ ಪದಾರ್ಥಗಳು ವಸ್ತುಗಳು ಎಲ್ಲವೂ ನೀರಿನಲ್ಲಿ ಮುಳುಗಡೆಯಾಗಿದೆ.
3/ 6
ಗುರುವಾರ ರಾತ್ರಿ ಒಂದು ಗಂಟೆಗೂ ಅಧಿಕ ಕಾಲ ಬೆಂಗಳೂರಿನಲ್ಲಿ ಮಳೆಯಾಗಿದ್ದು. ರಸ್ತೆಗಳ ಮೇಲೆ ನೀರು ಹೊಳೆಯಂತೆ ಹರಿದು ಬರುವ ದೃಶ್ಯ ಕಂಡು ಬಂತು. ಮೆಜೆಸ್ಟಿಕ್, ಶಾಂತಿನಗರ, ವಿಧಾನಸೌಧ, ರಾಜಾಜಿ ನಗರ, ಮತ್ತಿಕೆರೆ, ಯಶವಂತಪುರ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ.
4/ 6
ಇನ್ನು ಮಳೆಗೆ ರಸ್ತೆಗಳು ಕೊಚ್ಚಿ ಹೋಗಿವೆ. ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿ ಪೈಪ್ ಲೈನ್ ಕಾಮಗಾರಿ ನಡೆಸಿದ್ದ ರಸ್ತೆಗಳಲ್ಲಿ ಮಾರುದ್ದು ಗುಂಡಿಗಳು ಉಂಟಾಗಿದ್ದು, ಎರಡು ಕಾರ್ ಗಳು ಸಿಲುಕಿದ್ದವು, ಕೊನೆಗೆ ಕ್ರೇನ್ ಮೂಲಕ ಮೇಲೆತ್ತಲಾಯ್ತು.
5/ 6
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಬೆಂಗಳೂರು ಸೇರಿದಂತೆ ಹಲವೆಡೆ ಮಳೆರಾಯ ಅಬ್ಬರಿಸುತ್ತಿದ್ದಾರೆ. ರಾಜ್ಯದ ಆರು ಜಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಸಹ ಘೋಷಿಸಲಾಗಿದೆ. ಇನ್ನೂ ನಾಲ್ಕು ದಿನ ಮಳೆ ಮುಂದುವರಿಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
6/ 6
ಕೇರಳದ ಐದು ಜಿಲ್ಲೆಗಳಾದ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ. ತಮಿಳುನಾಡು, ಕರ್ನಾಟಕ, ಕೇರಳ ಮತ್ತು ಮಾಹೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.