Dharwad: ಕಲ್ಲಂಗಡಿ ಹಣ್ಣಿನಂಗಡಿ ಧ್ವಂಸ ಪ್ರಕರಣ: ಶ್ರೀರಾಮ ಸೇನೆಯ ನಾಲ್ವರು ಕಾರ್ಯಕರ್ತರ ಬಂಧನ
ಧಾರವಾಡದ ನುಗ್ಗಿಕೇರಿಯ ಶ್ರೀ ಆಂಜನೇಯನ ದೇವಸ್ಥಾನದಲ್ಲಿ ವ್ಯಾಪಾರ ಮಾಡುತ್ತಿದ್ದ ಮುಸ್ಲಿಂ ವ್ಯಾಪಾರಿಯ ಕಲ್ಲಂಗಡಿ ಹಣ್ಣಿನ ಅಂಗಡಿಯನ್ನು ಶ್ರೀರಾಮ ಸೇನೆಯ ಕಾರ್ಯಕರ್ತರ ಧ್ವಂಸ ಮಾಡಿದ್ದರು. ಕಲ್ಲಂಗಡಿಯನ್ನು ರಸ್ತೆಯಲ್ಲಿ ಒಡೆದು ಹಾಕಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಕಲ್ಲಂಗಡಿ ಹಣ್ಣಿನ ಅಂಗಡಿ ಧ್ವಂಸ ಸಂಬಂಧ ಧಾರಾವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಸಂಬಂಧ ಪೊಲೀಸರು ಶ್ರೀರಾಮ ಸೇನೆಯ ನಾಲ್ವರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಭಾನುವಾರ ಶ್ರೀರಾಮ ನವಮಿ ಹಿನ್ನೆಲೆ ದೇವಸ್ಥಾನದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ದೇವಸ್ಥಾನದ ಬಳಿ ವ್ಯಾಪಾರ ಮಾಡುತ್ತಿದ್ದ ಅನ್ಯಧರ್ಮಿಯರ ಐದು ಅಂಗಡಿಗಳು ಬಂದ್ ಮಾಡಲಾಗಿತ್ತು.
4/ 8
ಒಂದು ವಾರದ ಹಿಂದೆ ಅನ್ಯಧರ್ಮಿಯರ ವ್ಯಾಪಾರಕ್ಕೆ ಅನುಮತಿ ನೀಡಬಾರದು ಎಂದು ದೇಗುಲದ ಮಂಡಳಿಗೆ ಮನವಿ ಸಲ್ಲಿಸಿದ್ದರು. ವಾರದ ಬಳಿಕ ದೇಗುಲದ ಬಳಿ ಬಂದ ಶ್ರೀರಾಮ ಸೇನೆಯ ಗುಂಪು ಅಂಗಡಿಗಳನ್ನು ನಾಶ ಮಾಡಿತ್ತು.
5/ 8
ಐವರು ಮುಸ್ಲಿಂ ವ್ಯಾಪಾರಿಗಳ ಕಲ್ಲಂಗಡಿಗಳನ್ನು ನಾಶ ಮಾಡಲಾಗಿದ್ದು, ಇದರ ವಿಡಿಯೋ(Video)ಗಳು ಸೋಶಿಯಲ್ ಮೀಡಿಯಾ(Social Media)ದಲ್ಲಿ ವೈರಲ್ ಆಗಿವೆ.
6/ 8
ಈ ಸಂಬಂಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ(Former CM HD Kumaraswamy) ಪ್ರತಿಕ್ರಿಯೆ ನೀಡಿ ಶ್ರೀರಾಮಸೇನೆಯ ಕಾರ್ಯಕರ್ತರ ವಿರುದ್ಧ ಆಕ್ರೋಶ ಹೊರ ಹಾಕಿದ್ದರು.
7/ 8
ಧಾರವಾಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ನುಗ್ಗೆಕೇರಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ರಾಮಭಕ್ತರ ಸೋಗಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಮುಸ್ಲಿಮರ ಅಂಗಡಿಗಳನ್ನು ನಾಶಪಡಿಸಿ, ಅವರು ಮಾರಾಟಕ್ಕೆ ಇಟ್ಟಿದ್ದ ಕಲ್ಲಂಗಡಿ ಹಣ್ಣುಗಳನ್ನು ಹಾಳು ಮಾಡಿರುವುದು ಹೇಯ & ಪರಮ ಕಿರಾತಕ ಕೃತ್ಯ ಎಂದು ಖಂಡಿಸಿ್ದ್ದರು.
8/ 8
ಈ ರಕ್ಕಸರು ಕಲ್ಲಂಗಡಿಯನ್ನು ರಸ್ತೆಗೆಸೆದು ನಾಶ ಮಾಡಿದ ಪರಿಯನ್ನು ಗಮಿನಿಸಿದರೆ ಸಾಕು; ಇವರ ರಾಕ್ಷಸ ಪ್ರವೃತ್ತಿ ಉಗ್ರರಿಗಿಂತ ಕಮ್ಮಿಯೇನಲ್ಲ. ಅನ್ನವನ್ನೇ ಹಾಳುಗೆಡವಿದ ಈ ನೀಚರಿಗೆ ತಕ್ಕ ಪಾಠ ಕಲಿಸಲೇಬೇಕು ಎಂದು ಆಗ್ರಹಿಸಿದ್ದರು.