Crime News: ಚಾಕುವಿನಿಂದ ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ನಿ ಶವ, ಆತ್ಮಹತ್ಯೆಗೆ ಯತ್ನಿಸಿದ ಪತಿ

ಗಂಡ-ಹೆಂಡತಿ ಜಗಳ ಉಂಡು ಮಲಗುವ ತನಕ ಎಂಬ ಮಾತಿದೆ. ಆದರೆ ಶಿವಮೊಗ್ಗದಲ್ಲಿ ಇಬ್ಬರ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಇತ್ತ ಉತ್ತರ ಕನ್ನಡ ಜಿಲ್ಲೆಯಲ್ಲಿ ಪತಿಯೋರ್ವ ಕುಡಿದ ಮತ್ತಿನಲ್ಲಿ ಪತ್ನಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.

First published:

  • 17

    Crime News: ಚಾಕುವಿನಿಂದ ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ನಿ ಶವ, ಆತ್ಮಹತ್ಯೆಗೆ ಯತ್ನಿಸಿದ ಪತಿ

    ಶಿವಮೊಗ್ಗ ನಗರದ ಪ್ರಿಯಾಂಕ ಲೇಔಟ್​​ನಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ಸಾವನ್ನಪ್ಪಿದ್ದು, ಪತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾನೆ.

    MORE
    GALLERIES

  • 27

    Crime News: ಚಾಕುವಿನಿಂದ ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ನಿ ಶವ, ಆತ್ಮಹತ್ಯೆಗೆ ಯತ್ನಿಸಿದ ಪತಿ

    30 ವರ್ಷದ ಮಂಜುಳಾ ಮೃತ ಮಹಿಳೆ. ಮಂಜುಳಾ ಪತಿ ದಿನೇಶ್ ಚಾಕುವಿನಿಂದ ಕೈ ಕುಯ್ದುಕೊಂಡ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದಾನೆ.

    MORE
    GALLERIES

  • 37

    Crime News: ಚಾಕುವಿನಿಂದ ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ನಿ ಶವ, ಆತ್ಮಹತ್ಯೆಗೆ ಯತ್ನಿಸಿದ ಪತಿ

    ಮಂಜುಳಾ ಮೃತದೇಹ ಚಾಕುವಿನಿಂದ ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪತ್ನಿಯ ಕೊಲೆಯ ಬಳಿಕ ದಿನೇಶ್ ಆತ್ಮಹತ್ಯೆಗೆ ಯತ್ನಿಸಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ.

    MORE
    GALLERIES

  • 47

    Crime News: ಚಾಕುವಿನಿಂದ ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ನಿ ಶವ, ಆತ್ಮಹತ್ಯೆಗೆ ಯತ್ನಿಸಿದ ಪತಿ

    ಮಂಗಳವಾರ ರಾತ್ರಿ ಪತಿ ಮತ್ತು ಪತ್ನಿ ಗಲಾಟೆ ನಡೆದಿತ್ತು ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಸ್ಥಳೀಯರೇ ದಿನೇಶ್​​ನನ್ನು ಆಸ್ಪತ್ರೆಗೆ ದಾಖಲಿಸಿ ಪ್ರಕರಣದ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Crime News: ಚಾಕುವಿನಿಂದ ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ನಿ ಶವ, ಆತ್ಮಹತ್ಯೆಗೆ ಯತ್ನಿಸಿದ ಪತಿ

    ಈ ಸಂಬಂಧ  ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಯ ಕೊಲೆ ಆಯ್ತಾ? ಅವರೇ ಆತ್ಮಹತ್ಯೆಗೆ ಶರಣಾದ್ರೆ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Crime News: ಚಾಕುವಿನಿಂದ ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ನಿ ಶವ, ಆತ್ಮಹತ್ಯೆಗೆ ಯತ್ನಿಸಿದ ಪತಿ

    ಬೆಂಕಿ ಹಚ್ಚಿ, ವಿಷ ಕುಡಿದ 

    ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಗೋಡ ಗಣೇಶ ನಗರದಲ್ಲಿ ಚೆನ್ನಯ್ಯ ಎಂಬಾತ ಪತ್ನಿ ರೇಣುಕಾ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ನಂತರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Crime News: ಚಾಕುವಿನಿಂದ ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ನಿ ಶವ, ಆತ್ಮಹತ್ಯೆಗೆ ಯತ್ನಿಸಿದ ಪತಿ

    ಕುಡಿದ ಮತ್ತಿನಲ್ಲಿ ಬೆಂಕಿ ಹಚ್ಚಿದ್ದಾನೆ ಎಂದು ತಿಳಿದು ಬಂದಿದೆ. ಮಹಿಳೆಯ ಎದೆ, ಕಾಲು ಭಾಗದಲ್ಲಿ ಸುಟ್ಟ ಗಾಯಗಳಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತ ಚೆನ್ನಯ್ಯ ಸಹ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES