(PHOTOS): ವಿರೂಪಾಕ್ಷೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಯದುವೀರ್ ಪೂಜೆ
ಹಂಪಿಯ ಶ್ರೀ ವಿರೂಪಾಕ್ಷೇಶ್ವರ ಸ್ವಾಮಿ ದೇವಸ್ಥಾನಕ್ಕೆ ಮೈಸೂರಿನ ಯುವರಾಜ ಯದುವೀರ ಶ್ರೀಕಂಠದತ್ತ ಒಡೆಯರ್ ಬೆಳಗ್ಗೆ ಆಗಮಿಸಿ ಪೂಜೆ ಸಲ್ಲಿಸಿದರು. ದೇವಸ್ಥಾನಕ್ಕೆ ಬಂದಿದ್ದ ಯದುವೀರ ಒಡೆಯರ್ ರನ್ನು ದೇವಸ್ಥಾನ ಆಡಳಿತ ಮಂಡಳಿಯವರು ಸ್ವಾಗತಿಸಿದರು. ಶ್ರೀ ವಿರೂಪಾಕ್ಷೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ದೇವಸ್ಥಾನದಲ್ಲಿನ ಶಿಲ್ಪಕಲೆಯನ್ನು ವೀಕ್ಷಿಸಿ ಮಾಹಿತಿ ಪಡೆದರು. ನಿನ್ನೆ ಸಂಜೆ 6 ಗಂಟೆಗೆ ಹಂಪಿಯ ವಿಜಯವಿಠಲ ದೇವಸ್ಥಾನಕ್ಕೆ ಭೇಟಿ ನೀಡಿ ಕಲ್ಲಿನತೇರು, ಸಂಗೀತ ಮಂಟಪ ಸೇರಿ ಇತರ ಸ್ಮಾರಕಗಳನ್ನು ವೀಕ್ಷಿಸಿದ್ದರು. ಕೆಲವು ಚಿತ್ರಗಳು ನ್ಯೂಸ್ 18 ಕನ್ನಡದಲ್ಲಿ