ಕೇಂದ್ರ ಸರ್ಕಾರ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಹೆಚ್ಚು ಒತ್ತು ನೀಡುತ್ತಿದೆ. ಈಗಾಗಲೇ ಪ್ರತಿಷ್ಠಿತ ಕಂಪೆನಿಗಳು ಎಲೆಕ್ಟ್ರಿಕ್ ವಾಹನಗಳ ತಯಾರಿಗೆ ಮುಂದಾಗಿದೆ. ಹೀರೋ, ಮಾರುತಿ ಸುಜುಕಿ, ರಿವೋಲ್ಟ್ ಇಂಟಲಿಕಾರ್ಪ್ ಮುಂತಾದ ಕಂಪೆನಿ ಎಲೆಕ್ಟ್ರಿಕ್ ವಾಹನಗಳನ್ನು ತಯಾರಿಸುತ್ತಿದ್ದು, ಕೆಲ ಕಂಪೆನಿಗಳು ವಾಹನವನ್ನು ಬಿಡುಗಡೆ ಮಾಡಿದೆ. ಇದೀಗ, ರಿಸಾಲ ಎಲೆಕ್ಟ್ರಿಕ್ ಮೋಟಾರ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಭಾರತದಲ್ಲಿ ಎವೊಲೆಟ್ ಹೆಸರಿನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಹಾಗೂ ಬೈಕ್ ಅನ್ನು ಬಿಡುಗಡೆ ಮಾಡಿದೆ.