ಪ್ಯಾನ್ ಕಾರ್ಡ್ಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡುವುದು ಕಡ್ಡಾಯಗೊಳಿಸಲಾಗಿದೆ. ಈ ಸಂಖ್ಯೆಗಳ ಜೋಡಣೆಗೆ ಸೆಪ್ಟೆಂಬರ್ 30, 2019 ಕೊನೆಯ ದಿನ ಎಂದು ಘೋಷಿಸಲಾಗಿದೆ. ಇದರ ಬೆನ್ನಲ್ಲೇ ಇದೀಗ ಮತದಾನ ಗುರುತಿನ ಚೀಟಿ (ವೋಟರ್ ಐಡಿ) ಹಾಗೂ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.