ಐಕ್ಯೂ ಕಂಪೆನಿಯಿಂದ ಇತ್ತೀಚೆಗೆ ಮತ್ತೊಂದು ಹೊಸ ಸ್ಮಾರ್ಟ್‌ಫೋನ್ ಬಿಡುಗಡೆಯಾಗಿದೆ ಎಂದು ತಿಳಿದಿದೆ. ಐಕ್ಯೂ ನಿಯೋ 7 5ಜಿ (iQOO Neo 7 5G) ಮೊಬೈಲ್ ಮಾರುಕಟ್ಟೆಗೆ ಬಂದಿದೆ. ಐಕ್ಯೂ ಇಂಡಿಯಾ ಈ ಸ್ಮಾರ್ಟ್‌ಫೋನ್ ಅನ್ನು ಬೃಹತ್ ವೈಶಿಷ್ಟ್ಯಗಳೊಂದಿಗೆ ಪರಿಚಯಿಸಿದೆ. ಇದು ಕಳೆದ ವರ್ಷ ಬಿಡುಗಡೆಯಾದ ಐಕ್ಯೂ ನಿಯೋ 6 ನ ನವೀಕರಿಸಿದ ಆವೃತ್ತಿಯಾಗಿದೆ. ಈ ಹೊಸ ಸ್ಮಾರ್ಟ್‌ಫೋನ್ ಐಕ್ಯೂ ನಿಯೋ 6 ಮೊಬೈಲ್‌ನಂತೆ ಕಾಣುತ್ತದೆ ಆದರೆ ವೈಶಿಷ್ಟ್ಯಗಳಲ್ಲಿ ಕೆಲವು ಬದಲಾವಣೆಗಳಿವೆ.
ಐಕ್ಯೂ ನಿಯೋ 7 5ಜಿ ಸ್ಮಾರ್ಟ್‌ಫೋನ್ 120W ಫಾಸ್ಟ್ ಚಾರ್ಜಿಂಗ್, ಮೀಡಿಯಾ ಟೆಕ್ ಡೈಮೆನ್ಶನ್ 8200 ಪ್ರೊಸೆಸರ್, 64 ಮೆಗಾಪಿಕ್ಸೆಲ್ ನೊಂದಿಗೆ, ಟ್ರಿಪಲ್ ಕ್ಯಾಮೆರಾ ಸೆಟಪ್‌ನಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ನ ಆರಂಭಿಕ ಬೆಲೆ ರೂ.29,999 ಆಗಿದೆ. ಬ್ಯಾಂಕ್ ಆಫರ್‌ಗಳೊಂದಿಗೆ ನೀವು ಈ ಸ್ಮಾರ್ಟ್‌ಫೋನ್ ಅನ್ನು ಇನ್ನೂ ಕಡಿಮೆ ಬೆಲೆಗೆ ಸಹ ಹೊಂದಬಹುದು.
ಇನ್ನು ಈ ಸ್ಮಾರ್ಟ್‌ಫೋನ್ ಮೇಲೆ ಲಾಂಚ್ ಆಫರ್‌ಗಳೂ ಇವೆ. ಎಸ್‌ಬಿಐ ಕಾರ್ಡ್, ಎಚ್‌ಡಿಎಫ್‌ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳೊಂದಿಗೆ ಖರೀದಿಸಿದರೆ ರೂ. 150ದವರೆಗೆ ರಿಯಾಯಿತಿ ಲಭ್ಯವಿರುತ್ತದೆ. ಈ ಸ್ಮಾರ್ಟ್ಫೋನ್ನಲ್ಲಿ ಎಕ್ಸ್ಚೇಂಜ್ ಆಫರ್ ಲಭ್ಯವಿದ್ದು, ಈ ಮೂಲಕ ಹೆಚ್ಚುವರಿಯಾಗಿ ರೂ.2,000 ರಿಯಾಯಿತಿ ಪಡೆಯಬಹುದು. ಇನ್ನು ಈ ಸ್ಮಾರ್ಟ್‌ಫೋನ್ ಬ್ಲ್ಯಾಕ್ ಮತ್ತು ಫ್ರಾಸ್ಟ್ ಬ್ಲೂ ಬಣ್ಣಗಳಲ್ಲಿ ಲಭ್ಯವಿದೆ.
ಐಕ್ಯೂ ನಿಯೋ 7 5ಜಿ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಬಗ್ಗೆ ಹೇಳುವುದಾದರೆ, ಇದು 6.7-ಇಂಚಿನ ಪೂರ್ಣ ಹೆಚ್ಡಿ+ ಅಮೋಲ್ಡ್ ಡಿಸ್ಪ್ಲೇಯನ್ನು ಹೊಂದಿದ್ದು, 120Hz ರಿಫ್ರೆಶ್ ದರವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ MediaTek Dimension 8200 ಪ್ರೊಸೆಸರ್‌ನಿಂದ ನಡೆಸಲ್ಪಡುತ್ತಿದೆ. ಈ ಪ್ರೊಸೆಸರ್‌ನೊಂದಿಗೆ ಬಿಡುಗಡೆಯಾದ ಮೊದಲ ಸ್ಮಾರ್ಟ್‌ಫೋನ್ ಇದಾಗಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 13 ಆಪರೇಟಿಂಗ್ ಸಿಸ್ಟಂನಲ್ಲಿ ಕಾರ್ಯನಿರ್ವಹಿಸುತ್ತದೆ. ಆಂಡ್ರಾಯ್ಡ್ 15 ವರೆಗೆ ಅಪ್ಡೇಟ್ಗಳು ಮುಂದಿನದಿನಗಳಲ್ಲಿ ಬರುತ್ತದೆ ಎಮದು ಕಂಪೆನಿ ಘೋಷಿಸಿದೆ.