299 ರೂಪಾಯಿ ರೀಚಾರ್ಜ್ ಪ್ಲ್ಯಾನ್: ಬಿಎಸ್‌ಎನ್‌ಎಲ್ ಟೆಲಿಕಾಂನ 299 ರೂಪಾಯಿ ಪ್ಲ್ಯಾನ್ ಅಗ್ಗದ ಬೆಲೆಯ ಯೋಜನೆಯಾಗಿದ್ದು, ಇದು ಒಟ್ಟು 30 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಪ್ಲ್ಯಾನ್ನಲ್ಲಿ ಗ್ರಾಹಕರಿಗೆ ಪ್ರತಿದಿನ 3 ಜಿಬಿ ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯ್ಸ್ ಕಾಲ್ ಮಾಡುವ ಪ್ರಯೋಜನ ಸಿಗುತ್ತದೆ. ಇನ್ನು ದಿನದಲ್ಲಿ 3 ಜಿಬಿ ಡೇಟಾವನ್ನು ಬಳಕೆ ಮಾಡಿ ಮುಗಿದ ನಂತರ ಇಂಟರ್ನೆಟ್ ವೇಗವು 80 Kbps ಗೆ ಕಡಿಮೆಯಾಗುತ್ತದೆ.
347 ರೂಪಾಯಿ ರೀಚಾರ್ಜ್ ಪ್ಲ್ಯಾನ್: ಬಿಎಸ್‌ಎನ್‌ಎಲ್ ಟೆಲಿಕಾಂನ 347 ರೂಪಾಯಿ ಯೋಜನೆಯು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿಕೊಂಡಿದೆ. ಈ ಯೋಜನೆಯು ಗ್ರಾಹಕರಿಗೆ 2 ಜಿಬಿ ದೈನಂದಿನ ಡೇಟಾ, ದೈನಂದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯವನ್ನು ನೀಡುತ್ತದೆ. ಇದರೊಂದಿಗೆ ಅನಿಯಮಿತ ವಾಯ್ಸ್ ಕಾಲ್ ಮಾಡುವ ಪ್ರಯೋಜನ ಸಹ ಒಳಗೊಂಡಿದೆ. ಈ ಯೋಜನೆಯಲ್ಲೂ ಸಹ ನಿಗದಿತ ಡೇಟಾ ಮುಗಿದ ಬಳಿಕ ಇಂಟರ್ನೆಟ್ ವೇಗವು 80 Kbps ಇಳಿಕೆಯಾಗುತ್ತದೆ.