ನೋಕಿಯಾ ಕಂಪೆನಿ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುವ ಮೂಲಕ ಮಾರುಕಟ್ಟೆಯಲ್ಲಿ ಸಾಕಷ್ಟು ಗ್ರಾಹಕರನ್ನು ಹೊಂದಿದೆ. ಇದಕ್ಕಾಗಿಯೇ ನೋಕಿಯಾ ಕಂಪೆನಿ ಪ್ರತೀ ಬಾರಿ ತನ್ನ ಬ್ರಾಂಡ್ನ ಅಡಿಯಲ್ಲಿ ಸ್ಮಾರ್ಟ್‌ಫೋನ್ ಬಿಡುಗಡೆಯಾಗುವಾಗ ಗ್ರಾಹಕರಲ್ಲಿ ಭಾರೀ ನಿರೀಕ್ಷೆಯನ್ನು ಹುಟ್ಟಿಸುತ್ತದೆ. ಇದೀಗ ಟೆಕ್ ವಲಯದಲ್ಲಿ ಸೈಲೆಂಟ್ ಆಗಿ ತನ್ನ ಹೊಸ ನೋಕಿಯಾ C02 ಸ್ಮಾರ್ಟ್‌ಫೋನ್ ಅನ್ನು ಪರಿಚಯಿಸಿದೆ.
ನೋಕಿಯಾ C02 ಬ್ಯಾಟರಿ ಬ್ಯಾಕಪ್: ನೋಕಿಯಾ C02 ಸ್ಮಾರ್ಟ್‌ಫೋನ್ 5W ಚಾರ್ಜಿಂಗ್ ಬೆಂಬಲಿಸುವ 3,000mAh ಸಾಮರ್ಥ್ಯದ ರಿಮೂವೇಬಲ್ ಬ್ಯಾಟರಿಯನ್ನು ಒಳಗೊಂಡಿದೆ. ಇದು 5Q ಚಾರ್ಜಿಂಗ್ ಅನ್ನು ಸಹ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್ 4.2, ಮೈಕ್ರೋ-ಯುಎಸ್‌ಬಿ ಪೋರ್ಟ್ ಮತ್ತು 3.5 ಎಂಎಂ ಆಡಿಯೊ ಜ್ಯಾಕ್ ಬೆಂಬಲಿಸಲಿದೆ. ಇದು ಫೇಸ್ ಅನ್‌ಲಾಕಿಂಗ್ ಅನ್ನು ಸಹ ಬೆಂಬಲಿಸುತ್ತದೆ ಎಂದು ಹೇಳಲಾಗಿದೆ.
ನೋಕಿಯಾ C02 ಬೆಲೆ ಮತ್ತು ಲಭ್ಯತೆ: ನೋಕಿಯಾ C02 ಸ್ಮಾರ್ಟ್‌ಫೋನ್‌ನ ಬೆಲೆ ಮತ್ತು ಲಭ್ಯತೆಯ ಬಗ್ಗೆ ಇನ್ನೂ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಆದರೆ ಈ ಸ್ಮಾರ್ಟ್‌ಫೋನ್ ಈಗಾಗಲೇ ಕಂಪೆನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪಟ್ಟಿ ಮಾಡಿರುವುದರಿಂದ ಶೀಘ್ರದಲ್ಲೇ ಬೆಲೆ ಹಾಗೂ ಲಭ್ಯತೆ ವಿವರಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ. ಇನ್ನು ಸ್ಮಾರ್ಟ್‌ಫೋನ್ ಚಾರ್ಕೋಲ್ ಗ್ರೇ ಮತ್ತು ಡಾರ್ಕ್ ಸಯಾನ್ ಬಣ್ಣದ ಆಯ್ಕೆಗಳಲ್ಲಿ ಮಾರಾಟವಾಗಲಿದೆ.