ಸ್ಯಾಮ್ಸಂಗ್ ಗ್ಯಾಲಕ್ಸಿ ಎಮ್33 5ಜಿ ಸ್ಮಾರ್ಟ್ಫೋನ್ 6.6 ಇಂಚಿನ TFT ಡಿಸ್ಪ್ಲೇಯೊಂದಿಗೆ ಪ್ಯಾಕ್ ಮಾಡಲ್ಪಟ್ಟಿದೆ ಮತ್ತು ಇದು 1080 x 2408 ಪಿಕ್ಸೆಲ್ಗಳ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ನೀಡುತ್ತದೆ. ಈ ಫೋನ್ Samsung Exynos 1280 ಪ್ರೊಸೆಸರ್ನಿಂದ ಕಾರ್ಯನಿರ್ವಹಿಸುತ್ತದೆ. ಜೊತೆಗೆ ಇದು 6000 mAh ಬ್ಯಾಟರಿಯನ್ನು ಹೊಂದಿದೆ. ಸ್ಯಾಮ್ಸಂಗ್ ಗ್ಯಾಲಕ್ಸಿ ಎಮ್33 5ಜಿ ಸ್ಮಾರ್ಟ್ಫೋನ್ 6 ಜಿಬಿ ರ್ಯಾಮ್ ಮತ್ತು 128 ಜಿಬಿ ವರೆಗಿನ ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ. ಈ ಸ್ಮಾರ್ಟ್ಫೋನ್ ಅನ್ನು 20 ಸಾವಿರಕ್ಕಿಂತಲೂ ಕಡಿಮೆ ಬೆಲೆಯಲ್ಲಿ ಖರೀದಿ ಮಾಡಬಹುದಾಗಿದೆ.
ರಿಯಲ್ಮಿ 9 5ಜಿ ಎಸ್ಇ ಸ್ಮಾರ್ಟ್ಫೋನ್ 20000 ರೂಪಾಯಿ ಅಡಿಯಲ್ಲಿ ಬಿಡುಗಡೆಯಾದ ಅತ್ಯುತ್ತಮ ಫೋನ್ ಆಗಿದೆ. ಈ ಫೋನ್ ಅನೇಕ ಉತ್ತಮ ವೈಶಿಷ್ಟ್ಯಗಳನ್ನು ಹೊಂದಿದೆ. ರಿಯಲ್ಮಿ 9 ಎಸ್ಇ 5ಜಿ ಸ್ಮಾರ್ಟ್ಫೋನ್ 6.6 ಇಂಚಿನ IPS LCD ಡಿಸ್ಪ್ಲೇಯನ್ನು ಹೊಂದಿದೆ. ಇದು 1080 x 2412 ಪಿಕ್ಸೆಲ್ಗಳ ಹೆಚ್ಡಿ+ ಸ್ಕ್ರೀನ್ ರೆಸಲ್ಯೂಶನ್ ಹೊಂದಿದೆ. ಇನ್ನು ರಿಯಲ್ಮಿ 9 ಎಸ್ಇ 5ಜಿ ಸ್ಮಾರ್ಟ್ಫೋನ್ 5000mAh ಬ್ಯಾಟರಿಯೊಂದಿಗೆ ಬಿಡುಗಡೆಯಾಗಿದೆ, ಇದು 30W ಡಾರ್ಟ್ ಚಾರ್ಜಿಂಗ್ ವೇಗವನ್ನು ಬೆಂಬಲಿಸುತ್ತದೆ.
ಒನ್ಪ್ಲಸ್ ತನ್ನ ಇತ್ತೀಚಿನ ನಾರ್ಡ್ ಸಿಇ 2 ಲೈಟ್ 5ಜಿ ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಫೋನ್ 20,000 ರೂಪಾಯಿಗಳಲ್ಲಿ ಲಭ್ಯವಿರುವ ಅತ್ಯುತ್ತಮ ಫೋನ್ಗಳಲ್ಲಿ ಒಂದಾಗಿದೆ. ಒನ್ಪ್ಲಸ್ ನಾರ್ಡ್ ಸಿಇ 2 ಲೈಟ್ 5ಜಿ IPS LCD ಮಾದರಿಯ ಡಿಸ್ಪ್ಲೇಯನ್ನು ಹೊಂದಿದೆ, ಇದು 1080 x 2412 ಪಿಕ್ಸೆಲ್ಗಳ ರೆಸಲ್ಯೂಶನ್ ಮತ್ತು 401ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ.