ಕ್ಯಾಮೆರಾ ಸೆಟಪ್: ಟೆಕ್ನೋ ಪಾಪ್ 7 ಪ್ರೊ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ ಡ್ಯುಯಲ್ ಮೈಕ್ರೋ ಸ್ಲಿಟ್ ಫ್ಲ್ಯಾಷ್‌ಲೈಟ್‌ನೊಂದಿಗೆ 5 ಮೆಗಾಪಿಕ್ಸೆಲ್ AI ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಇದನ್ನು ಟಿಯರ್ ಡ್ರಾಪ್ ಕಟೌಟ್ ಸ್ಲಾಟ್‌ನಲ್ಲಿ ಇರಿಸಲಾಗಿದೆ.
ಬೆಲೆ ಮತ್ತು ಲಭ್ಯತೆ: ಟೆಕ್ನೋ ಪಾಪ್ 7 ಪ್ರೋ ಸ್ಮಾರ್ಟ್‌ಫೋನ್ 4ಜಿಬಿ ರ್‍ಯಾಮ್ ಮತ್ತು 64ಜಿಬಿ ಇಂಟರ್ನಲ್ ಸ್ಟೋರೇಜ್ ಬೆಲೆ 6,799ರೂಪಾಯಿ ಆಗಿದೆ. ಜೊತೆಗೆ 6ಜಿಬಿ ರ್‍ಯಾಮ್ ಮತ್ತು 64ಜಿಬಿ ಇಂಟರ್ನಲ್ ಸ್ಟೋರೆಜ್ ಸಾಮರ್ಥ್ಯದ ಆಯ್ಕೆಗೆ 7,299ರೂಪಾಯಿ ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಎಂಡ್‌ಲೆಸ್ ಬಾಲ್ಕ್ ಮತ್ತು ಯುಯುನಿ ಬ್ಲೂ ಕಲರ್ ಆಯ್ಕೆಗಳಲ್ಲಿ ಬರಲಿದೆ.