ಗೂಗಲ್ ಪಿಕ್ಸೆಲ್ 7 ಸ್ಮಾರ್ಟ್ಫೋನ್ 6.32 ಇಂಚಿನ ಫುಲ್ ಹೆಚ್ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದ್ದು, OLED ಡಿಸ್ಪ್ಲೇ ಯನ್ನು ಇದು ಒಳಗೊಂಡಿದೆ. ಇದು ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 778G+ SoC ಪ್ರೊಸೆಸರ್ನಿಂದ ಕಾರ್ಯನಿರ್ವಹಿಸುತ್ತದೆ. ಜೊತೆಗೆ ಡ್ಯುಯಲ್ ಕ್ಯಾಮೆರಾವನ್ನು ಈ ಸ್ಮಾರ್ಟ್ಫೋನ್ ಒಳಗೊಂಡಿದ್ದು, ಸೆನ್ಸಾರ್ ಮಾತ್ರ ಬೇರೆ ಬೇರೆ ರೀತಿಯಲ್ಲಿದೆ. ಈ ಎರಡು ಫೋನ್ಗಳ ಮುಖ್ಯ ಕ್ಯಾಮೆರಾ ಸೆನ್ಸಾರ್ 50 ಮೆಗಾ ಪಿಕ್ಸಲ್ ಸಾಮರ್ಥ್ಯವನ್ನು ಹೊಂದಿದೆ.
ಶಿಯೋಮಿ 12 ಪ್ರೋ: ಶಿಯೋಮಿ 12 ಪ್ರೊ ಸ್ಮಾರ್ಟ್ಫೋನ್ 6.72 ಇಂಚಿನ WQHD+ E5 ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX707 ಸೆನ್ಸಾರ್ ಅನ್ನು ಹೊಂದಿದ್ದು, ಜೊತೆಗೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು 12 ಪ್ರೋ ಮೊಬೈಲ್ ಹೊಂದಿದೆ.
ವಿವೋ ಎಕ್ಸ್80 ಪ್ರೋ: ವಿವೋ X80 ಪ್ರೊ ಸ್ಮಾರ್ಟ್ಫೋನ್ 1,440 x 3,200 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದ್ದು ಇದು 6.78 ಇಂಚಿನ AMOLED ಡಿಸ್ಪ್ಲೇಯನ್ನು ಹೊಂದಿದೆ. ಈ ಡಿಸ್ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ನೀಡುತ್ತದೆ. ಇದು ಸ್ನಾಪ್ಡ್ರಾಗನ್ 8 Gen 1 SoC ಪ್ರೊಸೆಸರ್ನೊಂದಿಗೆ ಕಾರ್ಯನಿರ್ವಹಿಸುತ್ತದೆ, ಇನ್ನು ಈ ಸ್ಮಾರ್ಟ್ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ನಲ್ಲಿ ಕಾರ್ಯನಿರ್ವಹಿಸುತ್ತದೆ.