ಸ್ಮಾರ್ಟ್ಫೋನ್ ಖರೀದಿಸಲು ಯೋಚಿಸುತ್ತಿರುವವರಿಗೆ ಇದು ಉತ್ತಮ ಅವಕಾಶ.2022 ರಲ್ಲಿ ಬಿಡುಗಡೆಯಾದ ಅತ್ಯುತ್ತಮ ಬಜೆಟ್ ಶ್ರೇಣಿಯ 5ಜಿ ಸ್ಮಾರ್ಟ್ಫೋನ್ಗಳು ಯಾವುದೆಲ್ಲಾ ಎಂಬುದನ್ನು ಇಲ್ಲಿ ನೋಡೋಣ. ಹೊಸ ವರ್ಷಕ್ಕೆ ಯಾರಿಗಾದರೂ ಉಡುಗೊರೆ ನೀಡಲು ಯೋಜಿಸುತ್ತಿರುವಿರಾ? ಅಥವಾ ಹೊಸ ಸ್ಮಾರ್ಟ್ಫೋನ್ ಅನ್ನು ಖರೀದಿಯನ್ನು ಮಾಡಲು ಬಯಸುವಿರಾ? ಹಾಗಿದ್ರೆ ಇಲ್ಲಿದೆ 2022 ರಲ್ಲಿ ಬಿಡುಗಡೆಯಾದ ಅತ್ಯುತ್ತಮ ಬಜೆಟ್ ಶ್ರೇಣಿಯ 5G ಸ್ಮಾರ್ಟ್ಫೋನ್ಗಳು.
ಸ್ಯಾಮ್ಸಂಗ್ ಗ್ಯಾಲಕ್ಸಿ ಎಮ್33 5ಜಿ ಸ್ಮಾರ್ಟ್ಫೋನ್: ಈ ವರ್ಷ ಸ್ಯಾಮ್ಸಂಗ್ನಿಂದ ಬಜೆಟ್ ಶ್ರೇಣಿಯಲ್ಲಿ ಅದ್ಭುತ ವೈಶಿಷ್ಟ್ಯಗಳೊಂದಿಗೆ ಬಿಡುಗಡೆಯಾದ ಸ್ಮಾರ್ಟ್ಫೋನ್ ಎಂದರೆ ಅದು ಗ್ಯಾಲಕ್ಸಿ ಎಮ್33 ಸ್ಮಾರ್ಟ್ಫೋನ್. ಇದು 6.6-ಇಂಚಿನ FHD+ ಡಿಸ್ಪ್ಲೇ ಜೊತೆಗೆ 120Hz ರಿಫ್ರೆಶ್ ರೇಟ್ನೊಂದಿಗೆ ಬರುತ್ತದೆ. ಇದು 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, 2ನೇ ಕ್ಯಾಮೆರಾ 5 ಮೆಗಾಪಿಕ್ಸೆಲ್, 2 ಮೆಗಾಪಿಕ್ಸೆಲ್ ಕ್ಯಾಮೆರಾಗಳೊಂದಿಗೆ ಹಿಂಭಾಗದ ಕ್ವಾಡ್-ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಸೆಲ್ಫಿಗಾಗಿ ಮುಂಭಾಗದಲ್ಲಿ 8 ಮೆಗಾಪಿಕ್ಸೆಲ್ ಕ್ಯಾಮೆರಾ ಇದೆ. ಇದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುವ 6000 mAh ಬ್ಯಾಟರಿಯನ್ನು ಹೊಂದಿದೆ. ಈ ಸ್ಮಾರ್ಟ್ಫೋನ್ ಅನ್ನು ರೂ.18,999 ಕ್ಕೆ ಬಿಡುಗಡೆ ಮಾಡಲಾಗಿದೆ.
ರಿಯಲ್ಮಿ 10 ಪ್ರೋ 5ಜಿ ಸ್ಮಾರ್ಟ್ಫೋನ್: ಈ ರಿಯಲ್ಮಿ ಕಂಪನಿಯ ಸ್ಮಾರ್ಟ್ಫೋನ್ ಅನ್ನು ರೂ 18,999 ಗೆ ಖರೀದಿಸಬಹುದು. ಈ ನೊಬೈಲ್ ಸ್ನಾಪ್ಡ್ರಾಗನ್ 695 ಪ್ರೊಸೆಸರ್ನೊಂದಿಗೆ ಕಾರ್ಯನಿರ್ವಹಿಸುತ್ತದೆ. 120Hz ರಿಫ್ರೆಶ್ ರೇಟ್ನೊಂದಿಗೆ 6.72-ಇಂಚಿನ ಪೂರ್ಣ HD+ IPS ಡಿಸ್ಪ್ಲೇಯನ್ನು ಇದು ಹೊಂದಿದೆ. ಇದು 108MP ಪ್ರಾಥಮಿಕ ಕ್ಯಾಮೆರಾ ಮತ್ತು 2MP ಡೆಪ್ತ್ ಸೆನ್ಸಾರ್ ಜೊತೆಗೆ ಹಿಂಭಾಗದ ಡ್ಯುಯಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ ಜೊತೆಗೆ 5,000 mAh ಬ್ಯಾಟರಿಯನ್ನು ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
ಒನ್ಪ್ಲಸ್ ನಾರ್ಡ್ ಸಿಇ 2 ಲೈಟ್ 5ಜಿ ಸ್ಮಾರ್ಟ್ಫೋನ್: ಈ ಸ್ಮಾರ್ಟ್ಫೊನ್ ಅನ್ನು ಬಜೆಟ್ ಶ್ರೇಣಿಯಲ್ಲಿ ಬಿಡುಗಡೆ ಮಾಡಲಾಗಿದೆ. 90Hz ರಿಫ್ರೆಶ್ ರೇಟ್ನೊಂದಿಗೆ 6.43-ಇಂಚಿನ ಅಮೋಲ್ಡ್ ಡಿಸ್ಪ್ಲೇಯೊಂದಿಗೆ ಬರುತ್ತದೆ. ಇದು ಮೀಡಿಯಾ ಟೆಕ್ ಡೈಮೆನ್ಶನ್ 900 ಪ್ರೊಸೆಸರ್ ಮೂಲಕ ಈ ಸ್ಮಾರ್ಟ್ಫೋನ್ ಕಾರ್ಯನಿರ್ವಹಿಸುತ್ತದೆ. ಇನ್ನು ಇದು 4,500mAh ಬ್ಯಾಟರಿಯನ್ನು ಹೊಂದಿದೆ. ಇದರ ಕ್ಯಾಮೆರಾ ಫೀಚರ್ಸ್ ಬಗ್ಗೆ ಹೇಳುವುದಾದರೆ ಇದು 64 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾದೊಂದಿಗೆ ಹಿಂಭಾಗದ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇನ್ನು ಈ ಮೊಬೈಲ್ ಅನ್ನು ರೂ.18,999ಕ್ಕೆ ಖರೀದಿಸಬಹುದು.
ರೆಡ್ಮಿ ನೋಟ್ 11 ಪ್ರೋ ಪ್ಲಸ್ 5ಜಿ ಸ್ಮಾರ್ಟ್ಫೋನ್ ಕ್ವಾಲ್ಕಮ್ ಸ್ನಾಪ್ಡ್ರಾಗನ್ 695 ಪ್ರೊಸೆಸರ್ನಿಂದ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್ಫೋನ್ ಅನ್ನು 2022 ರಲ್ಲಿ 19,999 ರೂಗಳ ಆರಂಭಿಕ ಬೆಲೆಯಲ್ಲಿ ಬಿಡುಗಡೆ ಮಾಡಲಾಯಿತು. ಇದು 120 Hz ಅಮೋಲ್ಡ್ ಪ್ಯಾನೆಲ್ನೊಂದಿಗೆ 6.67-ಇಂಚಿನ ಡಿಸ್ಪ್ಲೇಯೊಂದಿಗೆ ಬರುತ್ತದೆ. ಇನ್ನು ಇದು 108 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಲೆನ್ಸ್, 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಕ್ಯಾಮೆರಾಗಳನ್ನು ಒಳಗೊಂಡಿದೆ. ಜೊತೆಗೆ ಇದರಲ್ಲಿ 5000 mAh ಬ್ಯಾಟರಿಯನ್ನು ಅಳವಡಿಸಲಾಗಿದೆ.
ಮೊಟೊ ಜಿ82 5ಜಿ ಸ್ಮಾರ್ಟ್ಫೋನ್: ಈ ಸ್ಮಾರ್ಟ್ಫೋನ್ 120Hz ರಿಫ್ರೆಶ್ ರೇಟ್ನೊಂದಿಗೆ ಬರಲಿದೆ. ಇದರ ಅತ್ಯುತ್ತಮ ಕಾರ್ಯಕ್ಷಮತೆಗಾಗಿ ಹ್ಯಾಂಡ್ಸೆಟ್ ಸ್ನಾಪ್ಡ್ರಾಗನ್ 695 ಪ್ರೊಸೆಸರ್ನಿಂದ ಚಾಲಿತವಾಗಿದೆ. ಇನ್ನು ಡ್ಯುಯಲ್ ಸ್ಟಿರಿಯೋ ಸ್ಪೀಕರ್, 5000mAh ಬ್ಯಾಟರಿಯನ್ನು ಅಳವಡಿಸಲಾಗಿದೆ, ಕ್ಯಾಮೆರಾ ಫೀಚರ್ಸ್ ಬಗ್ಗೆ ಮಾತನಾಡುವುದಾದರೆ ಇದು 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, 8 ಮೆಗಾಪಿಕ್ಸೆಲ್ ಕ್ಯಾಮೆರಾದೊಂದಿಗೆ ಟ್ರಿಪಲ್ ಕ್ಯಾಮೆರಾ ಸೆಟಪ್ ಫೀಚರ್ ಅನ್ನು ಒಳಗೊಂಡಿದೆ. ಮತ್ತು ಇನ್ನು ಇದನ್ನು ಮಾರುಕಟ್ಟೆಯಲ್ಲಿ ರೂ 19,999 ಗೆ ಬಿಡುಗಡೆ ಮಾಡಲಾಗಿದೆ