ಈ ರೀತಿ ಒಕ್ಕಣ್ಣಿನ ನಾಗರ ಸಾಮಾನ್ಯವಾಗಿ ಕಾಣಸಿಗುವುದು ತೀರಾ ವಿರಳ. ಈ ನಾಗರ ಹಾವಿಗೆ ಕಣ್ಣಿನ ಗುಳಿ ಮಾತ್ರವಿದ್ದು, ಕಣ್ಣುಗುಡ್ಡೆ ಇರುವುದಿಲ್ಲ. ಕೆಲವು ಸಂದರ್ಭದಲ್ಲಿ ಹಾವುಗಳು ಮುಂಗುಸಿ ಜೊತೆ ಕಾದಾಡುವ ಸಂದರ್ಭದಲ್ಲಿ ಕಣ್ಣನ್ನು ಕಳೆದುಕೊಳ್ಳವ ಸಾಧ್ಯತೆಯಿದೆ. ಇನ್ನೂ ಕೆಲವು ಸಂದರ್ಭದಲ್ಲಿ ಇಲಿಗಳು ಕಚ್ಚುವುದರಿಂದಲೂ ಹೀಗೆ ಆಗಿರುವ ಸಾಧ್ಯತೆ ಇರುತ್ತದೆ ಎನ್ನುತ್ತಾರೆ ವನ್ಯಜೀವಿ ಸಂರಕ್ಷಕ ನಾಗರಾಜ್ ಬೆಳ್ಳೂರ್.