ರಾಜ್ಯದಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ರಿಯಾಯಿತಿ ದರದಲ್ಲಿ ಬಸ್ ಪ್ರಯಾಣ ಬೆಳೆಸಬಹುದಾಗಿದೆ. ಇಂತಹದ್ದೊಂದು ಅವಕಾಶವನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅವಕಾಶ ಕಲ್ಪಿಸಿಕೊಡುತ್ತಿದೆ. (ಸಾಂದರ್ಭಿಕ ಚಿತ್ರ)
2/ 8
ರಾಜ್ಯದ ನೋಂದಾಯಿತ ಕಟ್ಟಡ ಕಾರ್ಮಿಕರು ಇದರ ಲಾಭವನ್ನು ಪಡೆಯಬಹುದಾಗಿದೆ. (ಸಾಂದರ್ಭಿಕ ಚಿತ್ರ)
3/ 8
ಈ ಮೂಲಕ ಬಸ್ ಪಾಸ್ ನೊಂದಿಗೆ ದಿನಂಪ್ರತಿ ಕೆಲಸ, ಕಾರ್ಯಗಳಿಗೆ ತೆರಳಬಹುದಾಗಿದೆ. ಹಾಗಿದ್ರೆ ಬಸ್ ಪಾಸ್ ಗೆ ಅರ್ಜಿ ಸಲ್ಲಿಸುವುದು ಹೇಗೆ? ಎಲ್ಲಿ? ಅನ್ನೋದರ ಮಾಹಿತಿ ಇಲ್ಲಿದೆ. (ಸಾಂದರ್ಭಿಕ ಚಿತ್ರ)
4/ 8
ಆಸಕ್ತ ಕಾರ್ಮಿಕರು ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಜಿ ಸಲ್ಲಿಸುವ ಅರ್ಜಿದಾರರು ಕಡ್ಡಾಯವಾಗಿ ಸರ್ಕಾರಿ ನೋಂದಾಯಿತ ಕಟ್ಟಡ ಕಾರ್ಮಿಕ ಸದಸ್ಯತ್ವ ಹೊಂದಿರಬೇಕಾಗುತ್ತದೆ. (ಸಾಂದರ್ಭಿಕ ಚಿತ್ರ)
5/ 8
ಆಸಕ್ತರು ಸ್ಥಳೀಯ ಕರ್ನಾಟಕ ಒನ್ ಅಥವಾ ಗ್ರಾಮ ಒನ್ ಕೇಂದ್ರಗಳಲ್ಲಿ ಅರ್ಜಿಯನ್ನು ಪಡೆದು ಭರ್ತಿ ಮಾಡಿ ಸಲ್ಲಿಸಬೇಕಾಗುತ್ತದೆ. (ಸಾಂದರ್ಭಿಕ ಚಿತ್ರ)
6/ 8
ನೋಂದಾಯಿತ ಕಟ್ಟಡ ಕಾರ್ಮಿಕರು ಬಸ್ ಪಾಸ್ ಪಡೆದಲ್ಲಿ ತಮ್ಮ ವಾಸಸ್ಥಳದಿಂದ 45 ಕಿ.ಮೀ. ವರೆಗೆ ಉಚಿತವಾಗಿ ಪಯಣಿಸಬಹುದಾಗಿದೆ. (ಸಾಂದರ್ಭಿಕ ಚಿತ್ರ)
7/ 8
ಪ್ರತಿ ಬಸ್ ಪಾಸ್ ನ ದರ ಮಾಸಿಕ 1400 ಆಗಿರುತ್ತದೆ. ಮತ್ತು ಈ ಪಾಸ್ ಅವಧಿಯು 3 ತಿಂಗಳಾಗಿರುತ್ತದೆ. (ಸಾಂದರ್ಭಿಕ ಚಿತ್ರ)
8/ 8
ಕಾರ್ಮಿಕರು ಈ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಮನವಿ ಮಾಡಲಾಗಿದೆ. (ಸಾಂದರ್ಭಿಕ ಚಿತ್ರ)