ವಿಜಯಪುರ ವಿಮಾನ ನಿಲ್ದಾಣಕ್ಕೆ 2008 ರಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಬಿಎಸ್ ಯಡಿಯೂರಪ್ಪನವರು ಶಿಲಾನ್ಯಾಸ ನೆರವೇರಿಸಿದ್ದರು. ಆದರೆ ಕಾಮಗಾರಿ ಸಾಧ್ಯವಾಗಿರಲಿಲ್ಲ. ಬಳಿಕ 2021 ರ ಫೆಬ್ರವರಿಯಲ್ಲಿ ಕಾಕತಾಳೀಯ ಎಂಬಂತೆ ಮತ್ತೆ ಹದಿಮೂರು ವರ್ಷಗಳ ಬಳಿಕ ಮತ್ತೆ ಬಿಎಸ್ ಯಡಿಯೂರಪ್ಪನವರೇ ಶಿಲಾನ್ಯಾಸ ನೆರವೇರಿಸಿದ್ದರು. ಎಲ್ಲವೂ ನಿರೀಕ್ಷೆಯಂತೆ ಆಗಿದ್ದರೆ ಫೆಬ್ರವರಿ ಅಂತ್ಯಕ್ಕೆ ವಿಮಾನ ಹಾರಾಟ ನಡೆಸಬೇಕಿತ್ತು. (ಸಾಂದರ್ಭಿಕ ಚಿತ್ರ)
ದಿ. ಸಿದ್ದೇಶ್ವರ ಸ್ವಾಮೀಜಿ ಅವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಹೆಸರಿಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಕಾರಜೋಳ ಅವರು, ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ವಿಜಯಪುರ ವಿಮಾನ ನಿಲ್ದಾಣಕ್ಕೆ ಶ್ರೀ ಬಸವೇಶ್ವರರ ಹೆಸರು ಇಡುವ ಕುರಿತು ಅನುಮೋದನೆಯಾಗಿದೆ. ಈಗ ಹೆಸರು ಬದಲಿಸುವುದು ಸರಿಯಲ್ಲ. ಈ ವಿಚಾರವಾಗಿ ರಾಜಕೀಯ ಮಾಡುವುದು ಬೇಡ ಎಂದು ಮನವಿ ಮಾಡಿದ್ದಾರೆ (ಸಾಂದರ್ಭಿಕ ಚಿತ್ರ)