ಬೆಂಗಳೂರು(ಮಾ.21): ರಾಜ್ಯದಲ್ಲಿ ಮತ್ತೆ ಮೂರು ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 18ಕ್ಕೇರಿದೆ. ಇದನ್ನು ತಡೆಯಲು ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ರಾಜ್ಯಾದ್ಯಂತ 4,390 ಕೌನ್ಸಿಲಿಂಗ್ ಸ್ಟೇಷನ್‍ಗಳನ್ನು ಸ್ಥಾಪಿಸಿದೆ. ಜತೆಗೆ 38 ಸರ್ಕಾರಿ ಹಾಗೂ 35 ಖಾಸಗಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್‍ಗಳನ್ನು ಸ್ಥಾಪಿಸಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬೆಳಗ್ಗೆಯಿಂದ ರಾತ್ರಿಯವರೆಗೆ ಜನತಾ ಕರ್ಫ್ಯೂಗೆ ಕರೆ ನೀಡಿದ್ದಾರೆ.