ಹೋಮ್ » ವಿಡಿಯೋ

ಸುಳ್ವಾಡಿ ವಿಷ ಪ್ರಸಾದ ದುರಂತ: ಸಾವನ್ನಪ್ಪಿದ ಇನ್ನೋರ್ವ ವ್ಯಕ್ತಿಯ ಅಂತ್ಯಕ್ರೀಯೆ

ವಿಡಿಯೋ19:25 PM December 23, 2018

ಸುಳ್ವಾಡಿ ಮಾರಮ್ಮ ದೇವಸ್ಥಾನದಲ್ಲಿ ವಿಷಮಿಶ್ರಿತ ಪ್ರಸಾದಕ್ಕೆ ಬಲಿಯಾದವರ ಸಂಖ್ಯೆ ಈಗಾಗಲೇ 17 ಕ್ಕೇರಿದೆ. ಇನ್ನೂ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ 40ಕ್ಕು ಹೆಚ್ಚು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಈಗಾಗಲೇ ಘಟನೆಯಲ್ಲಿ ತೀವ್ರ ಅಸ್ವಸ್ಥರಾಗಿ ಚಿಕಿತ್ಸೆಪಡೆದು ಗುಣಮುಖರಾಗಿ ಮನೆಗೆ ಹಿಂದಿರುಗಿರುವ ಕೆಲವಾರು ಮಂದಿಗೆ ಮತ್ತೆ ಸಮಸ್ಯೆ ಕಾಣಿಸಿಕೊಂಡಿದೆ. ಹೊಟ್ಟೆಉರಿ ಹೊಟ್ಟೆ ನೋವು ಕಾಣಿಸಿಕೊಂಡು ಮತ್ತೆ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ನಡುವೆ ನಿನ್ನೆ ಮೈಸೂರಿನ ಸುಯೋಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ರಂಗನ್ ಅವರ ಅಂತ್ಯಕ್ರಿಯ ಸ್ವಗ್ರಾಮ ಹನೂರು ತಾಲೋಕಿನ ದೊರೆಸ್ವಾಮಿಮೇಡು ಗ್ರಾಮದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು

Shyam.Bapat

ಇತ್ತೀಚಿನದು Live TV

Top Stories