ಆಂಬಿಟೆಡ್ ಸಂಸ್ಥೆಯಿಂದ ಕಿಕ್ ಬ್ಯಾಕ್ ಪಡೆದಿರುವ ಆರೋಪದ ಮೇಲೆ ಸಿಸಿಬಿ ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳಲು ಮಾಜಿ ಸಚಿವ ಜನಾರ್ದನರೆಡ್ಡಿ tಲೆ ಮರೆಸಿಕೊಂಡಿದ್ದಾರೆ. ಅಜ್ಞಾತ ಸ್ಥಳದಿಂದಲೇ ಇಂದು ವಿಡಿಯೋ ಬಿಡುಗಡೆ ಮಾಡಿದ್ದು, ನಾನು ಎಲ್ಲಿಯೂ ಹೋಗಿಲ್ಲ. ಬೆಂಗಳೂರಿನಲ್ಲಿಯೇ ಇದ್ದು, ವಿಚಾರಣೆ ಹಾಜರಾಗುತ್ತೇನೆ ಎಂದು ವಿಡಿಯೋ ಸಂದೇಶ ಬಿಡುಗಡೆ ಮಾಡಿದ್ದಾರೆ.