Yuvraj Singh retires: ಕ್ರಿಕೆಟ್ ಜಗತ್ತು ಕಂಡ ಅತ್ಯುತ್ತಮ ಆಟಗಾರ, 2011ರ ವಿಶ್ವಕಪ್ ಹೀರೋ ಯುವರಾಜ್ ಸಿಂಗ್ ಇಂದು ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೊಷಿಸಿದ್ದಾರೆ. ಯುವರಾಜ್ ಇಂದು ನಿವೃತ್ತಿ ಹೇಳಲಿದ್ದಾರೆಂದು ನಿನ್ನೆಯಿಂದ ಸಾಮಾಜಿಕ ತಾಣಗಳಲ್ಲಿ ಭಾರೀ ಸುದ್ದಿಯಾಗಿತ್ತು. ಅದರಂತೆ ಬಿಸಿಸಿಐ ಜೊತೆ ಚರ್ಚಿಸಿ ಮುಂಬೈನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಸಿಕ್ಸರ್ ಸಿಂಗ್ ತಮ್ಮ ಕ್ರಿಕೆಟ್ ಜೀವನದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಂಡು 19 ವರ್ಷದ ಕ್ರಿಕೆಟ್ ಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ.