ಹೋಮ್ » ವಿಡಿಯೋ » ರಾಜ್ಯ

ರಾಜ್ಯದ 17 ಕಡೆಗಳಲ್ಲಿ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು

ರಾಜ್ಯ12:22 PM December 28, 2018

ರಾಜ್ಯದ 17 ಕಡೆಗಳಲ್ಲಿ ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ ಭ್ರಷ್ಟರ ನಿದ್ದೆ ಕೆಡಸಿದ್ದಾರೆ.. ಅದರಂತೆ ದಾವಣಗೆರೆಯ ಕೃಷಿ‌ ಇಲಾಖೆ ಡಿಡಿ ಹಂಸವೇಣಿ ಯವರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.. ಹಂಸವೇಣಿ ಹೆಸರಿನಲ್ಲಿ 75/40 ಅಳತೆಯ 3 ಅಂತಸ್ತಿನ ಒಂದು ಮನೆ, ಹರಪನಹಳ್ಳಿ ತಾಲೂಕಿನ ತೆಲಗಿ ಗ್ರಾಮದಲ್ಲಿ 15 ಎಕರೆ ಜಮೀನು, 1 ಜೈಲೋ ಕಾರು, 5 ದ್ವಿಚಕ್ರ ವಾಹನ, 1 ಟ್ರ್ಯಾಕ್ಟರ್ ಹಾಗೂ ಅಪಾರ ಪ್ರಮಾಣದ ಬೆಳ್ಳಿ, ಬಂಗಾರ ಪತ್ತೆಯಾಗಿದ್ದು.ನಾಗವೇಣಿ ಪತಿ ಕಾರವಾರ ತೋಟಗಾರಿಕೆ ಇಲಾಖೆ ಎಡಿ ಎನ್. ಕುಮಾರ್ ಮನೆ ಮೇಲೆ ಎಸಿಬಿ ದಾಳಿ ನಡೆಸಿದ್ದು ಏಕಾಕಾಲಕ್ಕೆ ಪತಿ ಪತ್ನಿಯರ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.‌. ಅಲ್ಲದೆ ಹಂಸವೇಣಿ ತಂದೆ ಮನೆ ಮೇಲೂ ದಾಳಿ ನಡೆಸಿದ್ದಾರೆ. ಇನ್ನು ದಾವಣಗೆರೆ ಎಸಿಬಿ ಡಿವೈಎಸ್ಪಿ ಪರಮೇಶ್ವರಪ್ಪ ನೇತೃತ್ವದಲ್ಲಿ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದು ಅಪಾರ ಪ್ರಮಾಣದ ದಾಖಲೆಗಳನ್ನು ಪರಿಶೀಲನೆ ನಡೆಯುತ್ತಿದೆ.

Shyam.Bapat

ಇತ್ತೀಚಿನದು

Top Stories

//