ಬೆಂಗಳೂರು (ನ.13): ಕರ್ನಾಟಕದ 17 ಶಾಸಕರನ್ನು ಅನರ್ಹ ಮಾಡಿದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಇಂದು ತೀರ್ಪು ನೀಡಿದೆ. ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ನೀಡಿದ್ದ ಅನರ್ಹತೆ ಆದೇಶವನ್ನು ಕೋರ್ಟ್ ಎತ್ತಿ ಹಿಡಿದಿದೆ. ಅದರ ಜತೆಜತೆಗೆ ಅನರ್ಹ ಶಾಸಕರಿಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವನ್ನೂ ಸುಪ್ರೀಂ ಕೋರ್ಟ್ ನೀಡಿದೆ. ಈ ತೀರ್ಪನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ವಾಗತಿಸಿದ್ದಾರೆ.