Karnataka Budget Highlights : ಮಹದಾಯಿ ಯೋಜನೆಯ ಬಗ್ಗೆಯೂ ಗಮನ ಸೆಳೆದಿರುವ ಸಿದ್ದರಾಮಯ್ಯ, “ಇದು ರಾಜ್ಯ ಸರ್ಕಾರದ ಹಾಗೂ ರೈತರಿಗೆ ಅನುಕೂಲವಾಗುವ ಮಹತ್ವಾಕಾಂಕ್ಷೆಯ ಯೋಜನೆ. ಇದಕ್ಕೆ ರಾಜ್ಯ ಸರ್ಕಾರ ಕೇವಲ 500 ಕೋಟಿ ರೂ ಹಣ ಬಿಡುಗಡೆ ಮಾಡಿದೆ. ಅಸಲಿಗೆ ಇಷ್ಟು ಹಣ ಸಾಲುವುದಿಲ್ಲ. ಹೀಗಾಗಿ ಸರಿಯಾದ ಯೋಜನೆ ರೂಪಿಸಿ ಕಾಲ ಕಾಲಕ್ಕೆ ಹಣ ಬಿಡುಗಡೆ ಮಾಡಿ ಮುಂದಿನ 2 ವರ್ಷದಲ್ಲಿ ಸಂಪೂರ್ಣ ಯೋಜನೆಯನ್ನು ಯಶಸ್ವಿಯಾಗಿ ಮುಗಿಸಿ ಉತ್ತರ ಕರ್ನಾಟಕ ಭಾಗದ ರೈತರಿಗೆ ಅನುಕೂಲ ಮಾಡಿಕೊಡಬೇಕು” ಎಂದು ಸಲಹೆ ನೀಡಿದ್ದಾರೆ.