ಯಾದಗಿರಿ (ನ. 14): ನೆಚ್ಚಿನ ಶಿಕ್ಷಕ ವರ್ಗಾವಣೆಯಾಗಿ ಬೇರೆ ಶಾಲೆಗೆ ಹೋಗುವಾಗ ಮಕ್ಕಳು ಕಣ್ಣೀರು ಹಾಕಿದ್ದಾರೆ. ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಸಂಕ್ಲಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ತಮ್ಮ ಗುರುಗಳನ್ನು ಬೇರೆಡೆಗೆ ಕಳಿಸಿಕೊಡಲು ಒಪ್ಪದೇ ಅಳುತ್ತಿದ್ದಾರೆ.