ಬೆಂಗಳೂರು (ಜು.20): ಐಎಂಎ ಜ್ಯುವೆಲರ್ಸ್ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ನನ್ನು ಜಾರಿ ನಿರ್ದೇಶನ ಅಧಿಕಾರಿಗಳು (ಇಡಿ) ದೆಹಲಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಕರೆತಂದಿದ್ದಾರೆ. ಮನ್ಸೂರ್ ಮಾಧ್ಯಮಗಳ ಕಣ್ಣಿಗೆ ಬೀಳದಂತೆ ಇಡಿ ಅಧಿಕಾರಿಗಳು ಎಚ್ಚರಿಕೆ ವಹಿಸಿದ್ದಾರೆ.