ಚಾಮರಾಜನಗರ: ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಕಾರಿಗೆ ರೈತರು ಮುತ್ತಿಗೆ ಹಾಕಿ ಪ್ರತಿಭಟಿಸಿದ ಘಟನೆ ನಡೆದಿದೆ. ಹುತ್ತೂರು ಕೆರೆ ಏತನೀರಾವರಿ ಯೋಜನೆ ಪೂರ್ಣಗೊಂಡಿದ್ದರು ರಾಜಕೀಯ ಕಾರಣಗಳಿಗೆ ಚಾಲನೆ ನೀಡದೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ ಗುಂಡ್ಲುಪೇಟೆ ಶಾಸಕ ನಿರಂಜನ್ ಕುಮಾರ್ ನೇತೃತ್ವದಲ್ಲಿ ನೂರಾರು ರೈತರು ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸುತ್ತಿದ್ದರು.