ಮೈತ್ರಿ ಕಾಪಾಡುವಲ್ಲಿ ಸಿಎಂ ಕುಮಾರಸ್ವಾಮಿ ವಿಫಲರಾಗಿದ್ದಾರೆ. ಸಮನ್ವಯ ಸಮಿತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ಕೂಡ ವಿಫಲರಾಗಿದ್ದಾರೆ. ರಾಜ್ಯ ರಾಜಕಾರಣಕ್ಕೆ ಗ್ರಹಣ ಹಿಡಿದು ವರ್ಷವಾಗಿದೆ. ಮೈತ್ರಿಯಲ್ಲಿ ಹಲವರು ಅಸಮಾಧಾನಗೊಂಡಿದ್ದಾರೆ. ಆದರೆ, ಯಾರೂ ಅತೃಪ್ತರನ್ನು ಸಮಾಧಾನಪಡಿಸುತ್ತಿಲ್ಲ. ಎಲ್ಲ ನಾಯಕರೂ ಜವಾಬ್ದಾರಿಯೇ ಇಲ್ಲದಂತೆ ವರ್ತಿಸುತ್ತಿದ್ದಾರೆ ಎಂದು ನವದೆಹಲಿಯಲ್ಲಿ ನ್ಯೂಸ್18ಗೆ ಜೆಡಿಎಸ್ ಮುಖಂಡ ಹೆಚ್. ವಿಶ್ವನಾಥ್ ಟೀಕಿಸಿದ್ದಾರೆ.