ಹಾಸನ: ಹೆಚ್. ವಿಶ್ವನಾಥ್ ರಾಜೀನಾಮೆಯಿಂದ ತೆರವಾಗಿರುವ ಹುಣಸೂರು ಕ್ಷೇತ್ರದಲ್ಲಿ ಜಿ.ಟಿ. ದೇವೇಗೌಡರ ಮಗ ಹರೀಶ್ ಗೌಡ ನಿಂತರೆ ಸಂತೋಷ ಎಂದು ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಯಾರೇ ಸ್ಪರ್ಧೆ ಮಾಡಿದರೂ ಅಭ್ಯಂತರವಿಲ್ಲ. ಎಲ್ಲಾ ಕ್ಷೇತ್ರಗಳಲ್ಲೂ ಪ್ರಚಾರ ಮಾಡುತ್ತೇನೆ. ನಾಲ್ಕು ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದವರು ತಿಳಿಸಿದ್ದಾರೆ.