ಟೆಲಿಗ್ರಾಫ್ ಕಾಯ್ದೆ ಪ್ರಕಾರ ಟೆಲಿಫೋನ್ ಕದ್ದಾಲಿಕೆ ಶಿಕ್ಷಾರ್ಹ ಅಪರಾಧ. ಕುಮಾರಸ್ವಾಮಿಯವರು ಟೆಲಿಫೋನ್ ಕದ್ದಾಲಿಕೆ ಮಾಡಿರುವುದು ಮೇಲ್ನೋಟಕ್ಕೆ ದೃಢಪಟ್ಟಿದೆ. ಹಾಗಾಗಿ ಈ ಪ್ರಕರಣವನ್ನು ಯಡಿಯೂರಪ್ಪ ಸಿಬಿಐ ತನಿಖೆಗೆ ವಹಿಸಿರುವುದನ್ನು ಸ್ವಾಗತಿಸುತ್ತೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.