ಹಾವೇರಿ (ಡಿ. 4): ರಾಜ್ಯ ವಿಧಾನಸಭಾ ಉಪಚುನಾವಣೆಗೆ ಕೇವಲ 1 ದಿನ ಬಾಕಿ ಉಳಿದಿದೆ. ಈಗಾಗಲೇ ರಾಜ್ಯದ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಾಯಕರ ಬಹಿರಂಗ ಪ್ರಚಾರ ಅಂತ್ಯವಾಗಿದೆ. ಇಂದು ಮನೆಮನೆ ಭೇಟಿ ಮಾಡಿ ಮತಯಾಚನೆ ಮಾಡಲಿದ್ದಾರೆ. ಚುನಾವಣೆಯ ತಲೆಬಿಸಿಯ ನಡುವೆ ಕಾಂಗ್ರೆಸ್ಗೆ ಮತ್ತೊಂದು ಆಘಾತ ಎದುರಾಗಿದ್ದು, ರಾಣೆಬೆನ್ನೂರು ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ. ಕೋಳಿವಾಡ ಅವರ ಮನೆ ಮೇಲೆ ಐಟಿ ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.