ಟಿಪ್ಪು ಇತಿಹಾಸವನ್ನು ಪಠ್ಯದಿಂದ ತೆಗೆಯುವ ವಿಚಾರವಾಗಿ ಜೆಡಿಎಸ್ ಮುಖಂಡ ಬಸವರಾಜ್ ಹೊರಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ತಜ್ಞರ ಸಮಿತಿ ವರದಿ ಆಧರಿಸಿ ನಿರ್ಧಾರ ತೆಗೆದುಕೊಳ್ಳಬೇಕು. ರಾಜ್ಯ ಸರ್ಕಾರ ತರಾತುರಿ ನಿರ್ಧಾರ ಮಾಡುವುದು ತಪ್ಪು.ಯಾವುದೇ ಸರ್ಕಾರವಾದರೂ ಶಾಶ್ವತವಾಗಿ ಇರಲ್ಲ ಎಂದರು. ಇದೇ ವೇಳೆ ಅನರ್ಹ ಶಾಸಕರು ಬಿಜೆಪಿ ಮೇಲೆ ನಂಬಿಕೆ ಇಟ್ಟು ರಾಜೀನಾಮೆ ಕೊಟ್ಟಿದ್ದಾರೆ. ಅನರ್ಹರ ವಿಚಾರದಲ್ಲಿ ಯಡಿಯೂರಪ್ಪನವರ ಹೇಳಿಕೆ ಸರಿಯಾಗಿದೆ. ಈ ವಿಚಾರದಲ್ಲಿ ಯಡಿಯೂರಪ್ಪನವರಿಗೆ ನನ್ನ ಬೆಂಬಲವಿದೆ. ಈಗಾಗಲೇ ಆಪರೇಷನ್ ಕಮಲ ಆಗಿಹೋಗಿದೆ. ಹೀಗಾಗಿ ಕೊಟ್ಟ ಮಾತಿನಂತೆ ನಡೆದುಕೊಳ್ಳುವುದು ಬಿಜೆಪಿ ಧರ್ಮ.