ಬೆಂಗಳೂರು: ಅಸಮಾಧಾನಿತ ಕಾಂಗ್ರೆಸ್ ಶಾಸಕರು ಸುಮಲತಾ ಜೊತೆ ಊಟಕ್ಕೆ ಹೋಗಿದ್ದರಲ್ಲಿ ತಪ್ಪೇನಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಅಭಿಪ್ರಾಯಪಟ್ಟರು. ಮಂಡ್ಯದಲ್ಲಿ ಕಾಂಗ್ರೆಸ್ ನಾಯಕರು ಮೈತ್ರಿಧರ್ಮ ಪಾಲಿಸಿಲ್ಲ ಎಂಬ ಆರೋಪವನ್ನು ತಳ್ಳಿಹಾಕಿದ ಅವರು, ಚುನಾವಣೆಗೆ ಮುಂಚೆ ಕಾಂಗ್ರೆಸ್ ಅತೃಪ್ತರು ಸುಮಲತಾ ಜೊತೆ ಪ್ರಚಾರಕ್ಕೆ ಹೋಗಿಲ್ಲ ಎಂದು ಸ್ಪಷ್ಟಪಡಿಸಿದರು.