ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಲು ರಾಹುಲ್ ಗಾಂಧಿ, ಸೋನಿಯಾ ಒಪ್ಪಲಿಲ್ಲ ಎಂಬ ದೇವೇಗೌಡರ ಹೇಳಿಕೆಗೆ ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಗರಂ ಆಗಿದ್ದಾರೆ. ಕೇವಲ ರಾಜಕಾರಣಕ್ಕಾಗಿ, ಚುನಾವಣೆ ಹಿನ್ನೆಲೆಯಲ್ಲಿ ಈ ರೀತಿ ಹೇಳಿಕೆ ಕೊಡುತ್ತಾರೆ. ಮುಂದಾದರೂ ಈ ದಲಿತ ಮುಖ್ಯಮಂತ್ರಿ ಮಾಡುವ ಬಗ್ಗೆ ಬದ್ಧತೆ ತೋರಲಿ. ದಲಿತರಲ್ಲಿ ಸಮರ್ಥ ನಾಯಕರಿದ್ದಾರೆ. ಮುಖ್ಯಮಂತ್ರಿ ಸ್ಥಾನ ನಿಭಾಯಿಸುವವರಿದ್ದಾರೆ. ರಂಗನಾಥ್, ಬಸವಲಿಂಗಯ್ಯ, ರಾಚಯ್ಯ, ಮಲ್ಲಿಕಾರ್ಜುನ ಖರ್ಗೆ ಅಂತ ನಾಯಕರು ಇದ್ದಾರೆ. ಅಂತ ಮಹಾನ್ ಮಾಯಕರಿಗೂ ಮುಖ್ಯಮಂತ್ರಿ ಸ್ಥಾನ ಸಿಗಲಿಲ್ಲ. ಮುಖ್ಯಮಂತ್ರಿ ಆಗುವ ಅವಕಾಶ ಬಂದಾಗಲೂ ಯಾರೂ ಅವರ ಪರ ನಿಲ್ಲಲಿಲ್ಲ. ಕೇವಲ ಚುನಾವಣೆ ಬಂದಾಗ ಈ ರೀತಿ ಹೇಳಿಕೆ ನೀಡೋದು ಸರಿಯಲ್ಲ ಎಂದು ದೇವೇಗೌಡರ ವಿರುದ್ದ ಹರಿಹಾಯ್ದರು.