ಮಹಾ ಪ್ರವಾಹದಿಂದ ಉಕ್ಕಿ ಹರಿಯುತ್ತಿರುವ ಮಲಪ್ರಭಾ ನದಿಯ ಪ್ರವಾಹದಿಂದ 1 ಸಾವಿರಕ್ಕೂ ಹೆಚ್ಚು ಮನೆಗಳು ನೆಲಸಮವಾಗಿವೆ. ಗದಗದ ನರಗುಂದ ತಾಲೂಕಿನ ಕೊಣ್ಣೂರು ಗ್ರಾಮದಲ್ಲಿ ಮನೆಗಳು ನೆಲಸಮವಾಗಿದ್ದು, ನರಗುಂದ, ರೋಣ ತಾಲೂಕಿನ 15ಕ್ಕೂ ಹೆಚ್ಚು ಗ್ರಾಮಗಳಿಗೆ ಹಾನಿಯಾಗಿದೆ. ಪ್ರವಾಹ ಕಡಿಮೆಯಾದ್ದರೂ ಜಿಲ್ಲಾಡಳಿತ ತಮ್ಮತ್ತ ತಿರುಗಿ ನೋಡುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.