ಮೈಸೂರು (ಅ.09): ಮೈಸೂರು ಉಸ್ತುವಾರಿ ಸಚಿವನಾಗಿ ದಸರಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದು, ಈ ಅವಕಾಶ ನೀಡಿದ ಮುಖ್ಯಮಂತ್ರಿಗಳಿಗೆ ನಾನು ಧನ್ಯವಾದ ತಿಳಿಸುತ್ತೇನೆ. ಈ ವೇಳೆ ಜಿಲ್ಲೆಯ ಎಲ್ಲಾ ಶಾಸಕರು, ಪರಿಷತ್ ಸದಸ್ಯರು, ಅಧಿಕಾರಿಗಳು ಸಹಕಾರ ನೀಡಿದರು. ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ದಸರಾ ಆಚರಣೆ ಕುರಿತು ಸಲಹೆ ನೀಡುವ ಜೊತೆಗೆ ಸಂಸದ ಪ್ರತಾಪ್ ಸಿಂಹ ಜೊತೆ ಎಚ್ಚರಿಕೆಯಿಂದ ಇರುವಂತೆ ಕಿವಿಮಾತು ಹೇಳಿದ್ದರು ಎಂದರು.