ಧಾರವಾಡ: ಸ್ಕೂಲ್ ಫೀಸ್ ಕಟ್ಟಿಲ್ಲವೆಂದು ವಿದ್ಯಾರ್ಥಿಗಳನ್ನು ಪೂರ್ವಬಾವಿ ಪರೀಕ್ಷೆಗೆ ಕೂರಿಸದ ಘಟನೆ ಬಾಸೆಲ್ ಮಿಷನ್ ಪ್ರೌಢ ಶಾಲೆಯಲ್ಲಿ ನಡೆದಿದೆ. ಆಕ್ರೋಶಗೊಂಡ ವಿದ್ಯಾರ್ಥಿಗಳ ಪೋಷಕರು ಶಾಲೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ನಂತರ ಆ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಮತಿ ಸಿಕ್ಕಿತು.