ಬೆಂಗಳೂರು (ಜುಲೈ.18); ಮೈತ್ರಿ ಸರ್ಕಾರ ಹಾಗೂ ನಾಯಕರು ಅಧಿಕಾರಕ್ಕೆ ಗೂಟ ಹೊಡ್ಕಂಡು ಕೂತಿಲ್ಲ. ಆದರೆ, ಇಂದು ರಾಜ್ಯದಲ್ಲಿ ಸರ್ಕಾರ ಬಹುಮತ ಸಾಬೀತುಪಡಿಸುವಂತಹ ಪರಿಸ್ಥಿತಿ ನಿರ್ಮಾಣವಾಗಲು ಕಾರಣ ಯಾರು? ಹಾಗೂ ಸರ್ಕಾರದ ಕಾರ್ಯಕ್ರಮ ಹಾಗೂ ನಿಲುವುಗಳನ್ನು ನಾವು ಕಾರ್ಯರೂಪಕ್ಕೆ ತಂದೆವು ಎಂಬುದನ್ನು ಜನರಿಗೆ ಸ್ಪಷ್ಟಪಡಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಸಿಎಂ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.