ರಾತ್ರಿ ಕಂಡ ಬಾವಿಗೆ ಹಗಲು ಬೀಳಲ್ಲ. ಅಂತಹ ಸಂಪ್ರದಾಯವೂ ನಮ್ಮ ಪಕ್ಷದಲ್ಲಿ ಇಲ್ಲ. ಜೆಡಿಎಸ್ ಜೊತೆ ಸರ್ಕಾರ ರಚನೆ ಪ್ರಶ್ನೆ ಇಲ್ಲ. ವಿಧಾನಸಭೆ, ಪರಿಷತ್ನಲ್ಲಿ ನಮ್ಮ ಹೋರಾಟ ನಿರಂತರ. ಸಿಎಂ ಕುಮಾರಸ್ವಾಮಿ ರಾಜೀನಾಮೆಗೆ ಆಗ್ರಹಿಸುತ್ತೇವೆ. ಈ ಬಗ್ಗೆ ಸೋಮವಾರದಿಂದ ಹೋರಾಟ ಮಾಡುತ್ತೇವೆ. ಜೆಡಿಎಸ್ ಜೊತೆಗೆ ಬಿಜೆಪಿ ಸರ್ಕಾರ ರಚನೆ ಮಾಡುವ ಪ್ರಶ್ನೆನೇ ಇಲ್ಲ. ಬಿಜೆಪಿ ಸರ್ಕಾರ ರಚನೆ ಮಾಡುತ್ತೆ. ಯಡಿಯೂರಪ್ಪನವರೇ ಮುಖ್ಯಮಂತ್ರಿ ಆಗುತ್ತಾರೆ ಎಂದು ಪರಿಷತ್ ಮುಖಂಡ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.