ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಖಡ್ಗ ಪ್ರದರ್ಶನ ಮಾಡಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಪ್ರಭುಗೌಡ ಚನ್ನಪ್ಪ ದೇಸಾಯಿ ಖಡ್ಗ ಪ್ರದರ್ಶನ ಮಾಡಿದ್ದಾರೆ. ಮಾರುತಿ ಬಡಾವಣೆಯಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯ ವಿಸರ್ಜನೆ ಮೆರವಣಿಗೆಯಲ್ಲಿ ಈ ಘಟನೆ ನಡೆದಿದೆ. ಖಡ್ಗ ಪ್ರದರ್ಶನ ಬಗ್ಗೆ ಸಾರ್ವಜನಿಕರಲ್ಲಿ ಬಾರಿ ಆಕ್ರೋಶ ವ್ಯಕ್ತವಾಗ್ತಿದೆ.