ಹೊಸದಾಗಿ ಫೋಟೋಶೂಟ್ ಮಾಡಿಸಿರುವ ರಶ್ಮಿಕಾ ಮಂದಣ್ಣ, ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ
ರೆಡ್ ಡ್ರೆಸ್ ತೊಟ್ಟ ರಶ್ಮಿಕಾ ಪಡ್ಡೆ ಹುಡುಗರ ನಿದ್ದೆ ಕದ್ದಿದ್ದಾರೆ. ಶ್ರೀವಲ್ಲಿ ಫೋಟೋಗಳು ಸಖತ್ ವೈರಲ್ ಆಗಿದೆ
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮುಟ್ಟಿದ್ದೆಲ್ಲಾ ಚಿನ್ನವಾಗ್ತಿದೆ. ಸಾಲು ಸಾಲು ಸಿನಿಮಾ ಆಫರ್ಗಳು ಶ್ರೀವಲ್ಲಿ ಕೈ ಸೇರಿದೆ
ಸ್ಯಾಂಡಲ್ವುಡ್, ಟಾಲಿವುಡ್, ಕಾಲಿವುಡ್ ಹಾಗೂ ಬಾಲಿವುಡ್ನಲ್ಲಿ ಸಿನಿಮಾ ಮಾಡಿ ಸ್ಟಾರ್ ನಟಿಯಾಗಿರುವ ರಶ್ಮಿಕಾ ಮಂದಣ್ಣಗೆ ಅಪಾರ ಅಭಿಮಾನಿ ಬಳಗವಿದೆ
ಸ್ಟಾರ್ ಹೀರೋಗಳ ಜೊತೆ ನಟಿಸಿ ಸೈ ಎನಿಸಿಕೊಂಡಿರುವ ನಟಿ ರಶ್ಮಿಕಾ ಮಂದಣ್ಣ ಕೈಯಲ್ಲಿ ಸಾಲು ಸಾಲು ಸಿನಿಮಾಗಳಿವೆ
ಬೆಂಗಳೂರಿನಲ್ಲಿ ಪದವಿ ಶಿಕ್ಷಣ ಪಡೆಯುತ್ತಿದ್ದಾಗ ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿಟ್ಟ ರಶ್ಮಿಕಾ ಮಂದಣ್ಣ, 2016ರಲ್ಲಿ ‘ಕಿರಿಕ್ ಪಾರ್ಟಿ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು
ಬಳಿಕ ಎರಡು ಕನ್ನಡ ಸಿನಿಮಾದಲ್ಲಿ ನಟಿಸಿದರು. ನಂತರ ಟಾಲಿವುಡ್ಗೆ ಹಾರಿದ್ದಾರೆ
ಚಲೋ ಸಿನಿಮಾ ಮೂಲಕ ಟಾಲಿವುಡ್ ಪ್ರವೇಶಿಸಿದ ರಶ್ಮಿಕಾ ಮಂದಣ್ಣ ಅನೇಕ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ
ಗೀತಾ ಗೋವಿಂದಂ ಸಿನಿಮಾದಲ್ಲಿ ನಟ ವಿಜಯ್ ದೇವರಕೊಂಡ, ರಶ್ಮಿಕಾ ಜೋಡಿ ಟಾಲಿವುಡ್ ಜನರನ್ನು ಮೋಡಿ ಮಾಡಿತು