ಏನಿದು ಭದ್ರಾ ಮೇಲ್ದಂಡೆ ಯೋಜನೆ?
ಕರ್ನಾಟಕದಲ್ಲಿ ಅತ್ಯಂತ ಮಹತ್ವ ಪಡೆದಿರುವ ನೀರಾವರಿ ಯೋಜನೆ ಈ ಭದ್ರಾ ಮೇಲ್ದಂಡೆ ಯೋಜನೆ
ಕರ್ನಾಟಕದ ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಗಳು ಈ ನೀರಾವರಿ ಯೋಜನೆಯ ಫಲಾನುಭವಿಗಳು
ಮಧ್ಯ ಕರ್ನಾಟಕದ ಬರೋಬ್ಬರಿ 5,57,022 ಎಕರೆ ಪ್ರದೇಶ ವಿಸ್ತಾರ ಹೊಂದಿರುವ ಭದ್ರಾ ಮೇಲ್ದಂಡೆ ಯೋಜನೆ ಬರೋಬ್ಬರಿ 367 ಕೆರೆಗಳಿಗೆ ಜೀವ ತುಂಬಿಸುತ್ತದೆ
ಹೀಗಾಗಿ ಈ ಪ್ರದೇಶಗಳ ನೀರಾವರಿಗೆ ಭದ್ರಾ ಮೇಲ್ದಂಡೆ ಯೋಜನೆ ಅತ್ಯಂತ ಮಹತ್ವದ್ದಾಗಿದೆ
ಕರ್ನಾಟಕದ ಒಟ್ಟು 787 ಗ್ರಾಮಗಳ 74.26 ಲಕ್ಷ ಜನರಿಗೆ ಈ ಯೋಜನೆಯಡಿ ಅನುಕೂಲವಾಗಲಿದೆ ಅನ್ನೋದು ಈ ಯೋಜನೆ ಮಹತ್ವ ಸಾರುತ್ತದೆ
ಸದ್ಯ ಭದ್ರಾ ಮೇಲ್ದಂಡೆ ಯೋಜನೆಯಡಿ 29.9 ಟಿಎಂಸಿ ನೀರನ್ನು ಬಳಸಲು ಸಮ್ಮತಿ ದೊರೆತಿದೆ
ಭದ್ರಾ ಮೇಲ್ದಂಡೆ ಯೋಜನೆ ಒಟ್ಟು ಎರಡು ಹಂತಗಳಲ್ಲಿ ಅನುಷ್ಠಾನಗೊಳ್ಳಲಿದೆ
ಪ್ಯಾಕೇಜ್ I ರ ಅಡಿ ತುಂಗಾ ನದಿಯಿಂದ 17.40 ಟಿ.ಎಂ.ಸಿ ನೀರನ್ನು ಎರಡು ಹಂತಗಳಲ್ಲಿ ಲಿಫ್ಟ್ ಮಾಡಿ ಭದ್ರಾ ಜಲಾಶಯಕ್ಕೆ ನೀರು ಹರಿಸುವ, ಕಾಮಗಾರಿ ಪ್ರಗತಿಯಲ್ಲಿದೆ
ಇದಕ್ಕೂ ಮಿಗಿಲಾಗಿ 2020-21 ರಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಪರಿಷ್ಕೃತ ಅಂದಾಜು ಮೊತ್ತ 21,473 ಕೋಟಿ ರೂ.ಗೆ ಹೆಚ್ಚಳವಾಗಿದೆ