ಇತಿಹಾಸ ಪ್ರಸಿದ್ಧ ಸಾಗರದ ಶ್ರೀ ಮಾರಿಕಾಂಬ ದೇವಿ ಜಾತ್ರೆ ಆರಂಭವಾಗಲಿದೆ.
ಮೂರು ವರ್ಷಕ್ಕೊಮ್ಮೆ ಜಾತ್ರೆ ನಡೆಯಲಿದೆ. 9 ದಿನದ ಜಾತ್ರೆ ಅವಧಿಯಲ್ಲಿ ತಾಯಿಯು ಒಂದು ದಿನ ತವರು ಮನೆಯಲ್ಲಿ, 8 ದಿನ ಗಂಡನ ಮನೆಯಲ್ಲಿ ದರ್ಶನ ನೀಡುತ್ತಾಳೆ.
ದೇವಿಯನ್ನು ಕಣ್ತುಂಬಿಕೊಳ್ಳಲು, ಆಕೆಯ ಆಶೀರ್ವಾದ ಪಡೆಯಲು ನಿತ್ಯ ಸಾವಿರಾರು ಭಕ್ತರು ಆಗಮಿಸಿ ಕೃತಾರ್ಥರಾಗ್ತಾರೆ.
ಸಾಂಪ್ರಾದಾಯಿಕ ಪೂಜಾ ವಿಧಿ ವಿಧಾನಗಳು ಬೆಳಗ್ಗೆ ಬ್ರಾಹ್ಮೀ ಮಹೂರ್ತದಲ್ಲಿ ನಡೆಯಿತು.
ಜಾತ್ರೆಯ ಮೊದಲ ದಿನವೇ ಸಾವಿರಾರು ಭಕ್ತರು ದೇವಿಯ ದರ್ಶನ ಪಡೆದರು.
ಬೆಳಗಿನ ಜಾವ ೩ ಗಂಟೆಗೆ ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಹಾಗಣಪತಿ ದೇವಾಲಯದಲ್ಲಿ ತಾಯಿ ಶ್ರೀ ಮಾರಿಕಾಂಬೆಯ ತಾಳಿ ಮತ್ತು ಆಭರಣಗಳಿಗೆ ಪೂಜೆ ಸಲ್ಲಿಸಲಾಯಿತು.
ಶ್ರೀ ಮಹಾಗಣಪತಿ ದೇವಾಲಯದಿಂದ ಮಂಗಳವಾದ್ಯಗಳೊಂದಿಗೆ ಸಾಗರ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿ ಬಂದ ದೇವಿಯ ಆಭರಣಗಳನ್ನು ತವರುಮನೆಗೆ ತರಲಾಯಿತು.
ಸಾಗರ ನಗರದ ತವರು ಮನೆಯಲ್ಲಿ ಪ್ರತಿಷ್ಠಾಪಿಸಿದ್ದ ಅತ್ಯಾಕರ್ಷಕವಾದ ಶ್ರೀ ಮಾರಿಕಾಂಬಾ ವಿಗ್ರಹಕ್ಕೆ ವಿವಿಧ ಸಾಂಪ್ರಾದಾಯಿಕ ಆಚರಣೆಗಳನ್ನು ನಡೆಸಿ ಆಭರಣಗಳನ್ನು ತೊಡಿಸಲಾಯಿತು.
ಪೂಜಾ ಕಾರ್ಯಕ್ರಮದ ನಂತರ ತಾಯಿಯ ವಿಗ್ರಹಕ್ಕೆ ಭಾರಿ ಗಾತ್ರದ ಹಾರ ಸೇರಿದಂತೆ ವೈವಿಧ್ಯಮಯ ಹೂವಿನ ಅಲಂಕಾರ ನಡೆಸಿ ಮಹಾಮಂಗಳಾರತಿ ನಡೆಸಲಾಯಿತು.
ಮಲೆನಾಡು ಸಾಗರದಲ್ಲಿ ನಡೆಯುವ ಈ ಜಾತ್ರೆ ಸ್ಥಳಿಯರಿಗೆ ಮನರಂಜನೆಯ ಬುತ್ತಿಯನ್ನೇ ಉಣಬಡಿಸಿತ್ತು,