ನಮ್ಮ ತುಮಕೂರಿನಲ್ಲಿ ಭಾರತದಲ್ಲೇ ಅತಿ ದೊಡ್ಡ ಹೆಲಿಕಾಪ್ಟರ್ ಕಾರ್ಖಾನೆ!

ಈ ಕಾರ್ಖಾನೆಯು ಒಟ್ಟು 615 ಎಕರೆ ಭೂಮಿಯಲ್ಲಿ ನಿರ್ಮಾಣಗೊಂಡಿದೆ.

ಮೊದಲ ಹಂತದಲ್ಲಿ ಈ ಕಾರ್ಖಾನೆಯು ಲೈಟ್ ಯುಟಿಲಿಟಿ ಹೆಲಿಕಾಪ್ಟರ್ಗಳನ್ನು ಉತ್ಪಾದಿಸಲಿದೆ.

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ನ ಹೆಲಿಕಾಪ್ಟರ್ ಫ್ಯಾಕ್ಟರಿ - ಇದನ್ನು 'ಗ್ರೀನ್ಫೀಲ್ಡ್ ಹೆಲಿಕಾಪ್ಟರ್ ಫ್ಯಾಕ್ಟರಿ' ಎಂದು ಕರೆಯಲಾಗುತ್ತದೆ.

ಭಾರತದ ಅತಿದೊಡ್ಡ ಹೆಲಿಕಾಪ್ಟರ್ ಉತ್ಪಾದನಾ ತಾಣವಾಗಲಿದೆ.

ಈ ಕಾರ್ಖಾನೆಯು ಆರಂಭದಲ್ಲಿ ವರ್ಷಕ್ಕೆ ಸುಮಾರು 30 ಹೆಲಿಕಾಪ್ಟರ್ಗಳನ್ನು ಉತ್ಪಾದಿಸುತ್ತದೆ. 

ಈ ಕಾರ್ಖಾನೆಯು ಲಘು ಯುದ್ಧ ಹೆಲಿಕಾಪ್ಟರ್ಗಳು ಮತ್ತು ಭಾರತೀಯ ಮಲ್ಟಿರೋಲ್ ಹೆಲಿಕಾಪ್ಟರ್ಗಳನ್ನು ಸಹ ಉತ್ಪಾದಿಸುತ್ತದೆ.

ಮುಂದಿನ 20 ವರ್ಷಗಳ ಅವಧಿಯಲ್ಲಿ ಒಟ್ಟು 4 ಲಕ್ಷ ಕೋಟಿ ರೂಪಾಯಿ ವ್ಯವಹಾರವಾಗುವ ನಿರೀಕ್ಷೆ ಇದೆ.

ಕಾರ್ಖಾನೆ ಆರಂಭದಿಂದ ತುಮಕೂರು ಸೇರಿದಂತೆ ಸ್ಥಳೀಯ ಜನರಿಗೆ ಉದ್ಯೋಗ ಅವಕಾಶ ದೊರೆಯಲಿದೆ.

ಒಟ್ಟು 616 ಎಕರೆ ಭೂ ಪ್ರದೇಶದಲ್ಲಿ 5 ಸಾವಿರ ಕೋಟಿ ರೂ. ವೆಚ್ಚದಲ್ಲಿ ಲಘು ಯುದ್ದ ಹೆಲಿಕಾಪ್ಟರ್ಗಳು ಇಲ್ಲಿ ತಯಾರಾಗಲಿದೆ.