ಈ ಡೆಲಿವರಿ ಬಾಯ್‍ನ ಜೀವನವೇ ಸ್ಪೂರ್ತಿ

ಬ್ಯಾಗ್​ಅನ್ನು ಹೆಗಲೇರಿಸಿಕೊಂಡು ಕೈಯ ಶಕ್ತಿಯಿಂದಲೇ ನಡೆಯುವ ಈ ಯುವಕನ ಹೆಸರು ಪರಶುರಾಮ

ಈ ಪರಶುರಾಮ ದೈಹಿಕ ನ್ಯೂನ್ಯತೆಗೆ ಸೆಡ್ಡು ಹೊಡೆದು ಭಿಕ್ಷಾಟನೆ ಬಿಟ್ಟು ಫುಡ್ ಡೆಲಿವರಿ ಬಾಯ್ ಆಗಿ ಜೀವನವನ್ನೇ ಗೆದ್ದಿದ್ದಾರೆ

ಮೂಲತಃ ವಿಜಯಪುರದವರಾದ ಪರಶುರಾಮ ಅವರ ಹೆತ್ತವರು ಕಳೆದ 30 ವರ್ಷಗಳಿಂದ ಮಂಗಳೂರಿನಲ್ಲಿದ್ದಾರೆ

ಹುಟ್ಟಿದ ಒಂದು ವರ್ಷದವರೆಗೆ ಸರಿಯಾಗಿಯೇ ಇದರು ಇವರು

ನಂತರ ಜ್ವರಕ್ಕೆ ವೈದ್ಯರೊಬ್ಬರು ನೀಡಿದ ಇಂಜೆಕ್ಷನ್​ನಿಂದ ಒಂದು ಕಾಲು ಸಂಪೂರ್ಣ ಸ್ವಾಧೀನ ಕಳೆದುಕೊಂಡಿತು

ಮತ್ತೊಂದು ಕಾಲು ಕೊಂಚ ಬಲವಿದ್ದರೂ, ಇವರು ಜೀವನಪರ್ಯಂತದ ಅಂಗವೈಕಲ್ಯಕ್ಕೆ ತುತ್ತಾದರು

9ನೇ ತರಗತಿಯವರೆಗೆ ಶಿಕ್ಷಣ ಪಡೆದ ಪರಶುರಾಮ ಆ ಬಳಿಕ ಮನೆಯಲ್ಲಿ ಬಡತನವಿದ್ದರಿಂದ ಭಿಕ್ಷಾಟನೆಗಿಳಿದರು

ಆದರೆ ಭಿಕ್ಷೆ ಬೇಡುವ ಕಾಯಕ ಇವರಿಗೆ ಹಿಂಸೆಯೆನಿಸಿ ಒಬ್ಬರ ಮನೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ದುಡಿಯಲಾರಂಭಿಸಿದರು

ಸರ್ಕಾರದ ಸ್ಕೀಮ್ ಒಂದರಲ್ಲಿ ದೊರೆತ ದ್ವಿಚಕ್ರ ವಾಹನದಿಂದ ಸ್ವಿಗ್ಗಿ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡಲು ಆರಂಭಿಸಿದರು ಈ ಪರಶುರಾಮ್