ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ Conditions Apply!
ರಾಜ್ಯದಲ್ಲಿ ಫ್ರೀ ಬಸ್ ಸ್ಕೀಮ್ಗೆ ದಿನಗಣನೆ ಶುರುವಾಗಿದೆ. ಯೋಜನೆ ಜಾರಿಗೆ ಬೇಕಾದ ಸಕಲ ತಯಾರಿಗಳನ್ನು ಸರ್ಕಾರ ಮಾಡಿಕೊಳ್ಳುತ್ತಿದೆ
ಸಾರಿಗೆ ಇಲಾಖೆಗೆ ಯೋಜನೆಗೆ ಸಂಬಂಧಿಸಿದಂತೆ ಅಗತ್ಯವಿರುವ ಮಾರ್ಗಸೂಚಿ ಹಾಗೂ ಷರತ್ತುಗಳನ್ನು ಸಿದ್ಧ ಪಡಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ
ಮಹಿಳೆಯರಿಗೆ ಉಚಿತ ಪ್ರಯಾಣ ಇರುವುದರಿಂದ ಎಲ್ಲಾ ಬಸ್ನಲ್ಲಿ ಪ್ರಯಾಣಿಸಲು ಅವಕಾಶ ಇರುವುದಿಲ್ಲ ಎನ್ನಲಾಗಿದೆ
ಸರ್ಕಾರಿ ಬಸ್ನಲ್ಲಿ ಪ್ರಯಾಣ ಮಾಡಲು ಮಹಿಳೆಯರಿಗೆ ಪ್ರತ್ಯೇಕ ಬಸ್ ಪಾಸ್ ವ್ಯವಸ್ಥೆ ಮಾಡಲಾಗುತ್ತದೆ
ಆದರೆ ಈ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡುವ ಅಗತ್ಯ ಇರುವುದಿಲ್ಲ ಹಾಗೂ ರಾಜ್ಯ ಗಡಿಯೊಳಗೆ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶ ಇರಲಿದೆ ಎನ್ನಲಾಗಿದೆ
ಐಷಾರಾಮಿ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ನಿರ್ಬಂಧ ಇರಲಿದೆ. ಕರ್ನಾಟಕ ನಾಗರೀಕರಿಗೆ ಮಾತ್ರ ಈ ಯೋಜನೆ ಲಭ್ಯವಾಗಲಿದೆ
ಪಾಸ್ ಪಡೆದುಕೊಳ್ಳಲು ಆಧಾರ್ ಕಾರ್ಡ್ ಕಡ್ಡಾಯ ಮಾಡುವ ನಿರೀಕ್ಷೆ ಇದೆ
ಎಲ್ಲಾ ಪ್ರೀಮಿಯಂ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಇರಲಿದೆ
ಈ ಎಲ್ಲಾ ಅಂಶಗಳೊಂದಿಗೆ ಇನ್ನು ಕೆಲವು ನಿರ್ಬಂಧಗಳು ಮಾರ್ಗಸೂಚಿಯಲ್ಲಿ ಇರುವ ಸಾಧ್ಯತೆ ಇದೆ